ಮುಂಡಗೋಡ: ಲೊಯೋಲ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಎಸಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲೂಕಿನ ಮುಡಸಾಲಿ ಗ್ರಾಮದ ಕಿರಣ ಯಲ್ಲಪ್ಪ ಟೊಪೊಜಿ(31) ಎಂಬವನೇ ಬಂಧಿತ ಆರೋಪಿ ಯಾಗಿದ್ದು ತಾಲೂಕಿನ ಕರಗಿನಕೊಪ್ಪ ಗ್ರಾಮದ ಲೊಯೋಲ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿರುವ ಆರೋಪಿಯೂ ಪಿಯುಸಿ ಪ್ರಥಮ ದರ್ಜೆ ಓದುತ್ತಿರುವ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಬಾಲಕಿ ಶಿಕ್ಷಕ ನೀಡುವ ಕಿರುಕುಳ ಬಗ್ಗೆ ಪಾಲಕರಿಗೆ ಮಾಹಿತಿ ನೀಡಿದ್ದು ಬಾಲಕಿಯ ತಾಯಿ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.