ಮಾನವ ಅಭಿವೃದ್ಧಿ ವರದಿ ಸಂಬಂಧ ನಡೆದ ಸಭೆಯನ್ನು ಜಿಪಂ ಸಿಇಒ ಉದ್ಘಾಟಿಸಿದರು.  
ಉತ್ತರ ಕನ್ನಡ

ಜಿಲ್ಲಾ ಮಾನವ ಅಭಿವೃದ್ಧಿ ವರದಿ ತಯಾರಿಕೆ ಸಿದ್ಧತೆ

ಸುಭಾಸ ಹೆಗಡೆ ಧೂಪದಹೊಂಡ
ಕಾರವಾರ: ಅಭಿವೃದ್ಧಿ ಎಂದರೆ ಮೂಲಭೂತ ಸೌಕರ್ಯಗಳು ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುವುದು ಮಾತ್ರವಲ್ಲ. ಅಸಮಾನತೆಯನ್ನು ತೊಡೆದ, ಮಾನವನ ಸಮಗ್ರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿಯಾಗಿದೆ ಎಂದು ಜಿಪಂ ಸಿಇಒ ಡಾ.ದಿಲೀಶ್ ಶಶಿ ಹೇಳಿದರು.
ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ -2031 ವರದಿ ತಯಾರಿಕೆಗೆ ಸಂಬಂಸಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ನಗರದ ಕ್ರಿಮ್ಸ್ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಅಭಿವೃದ್ಧಿ ವರದಿಯು ಇಡೀ ಜಿಲ್ಲೆಯ ಸಾರ್ವಜನಿಕರ ಅಭಿವೃದ್ಧಿಯ ಕುರಿತಂತೆ ನಿಖರವಾದ ಅಂಕಿ ಅಂಶಗಳು ಮತ್ತು ಅವರ ಈಗಿನ ಜೀವನ ಸ್ಥಿತಿ ಮತ್ತು ಅದನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ಉದ್ದೇಶವನ್ನು ಹೊಂದಿದ್ದು, ಹೊಸ ಯೋಜನೆಗಳ ಅನುಷ್ಠಾನ ಮಾಡಲು ಅನುಕೂಲವಾಗಲಿದೆ. ಜಿಲ್ಲೆಯು 2031 ರಲ್ಲಿ ಸುಸ್ಥಿರ ಅಭಿವೃದ್ಧಿ ಹೊಂದುವ ಕುರಿತಂತೆ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಯೋಜನೆಗಳ ಕುರಿತ ಮಾಹಿತಿಯನ್ನು ಒಳಗೊಂಡ ಸಮಗ್ರ ವರದಿ ತಯಾರಿಸುವಂತೆ ತಿಳಿಸಿದರು.
ಸಾಂಖ್ಯಿಕ ಇಲಾಖೆಯ ಪದನಿಮಿತ್ತ ಜಂಟಿ ಕಾರ್ಯದರ್ಶಿ ಹಾಗೂ ಹಿರಿಯ ನಿರ್ದೇಶಕ ಎಸ್.ಬಸವರಾಜ್ ಮಾತನಾಡಿ, ದೇಶ ಅಥವಾ ರಾಜ್ಯದ ಅಭಿವೃದ್ಧಿಯನ್ನು ಜನತೆಯ ತಲಾ ಆದಾಯ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಿಂದ ಪರಿಗಣಿಸದೇ ಇವುಗಳ ಜೊತೆಗೆ ಅಲ್ಲಿನ ಜನರ ಶಿಕ್ಷಣ, ಆರೋಗ್ಯ ಮತ್ತು ಜೀವನ ಮಟ್ಟವನ್ನು ಆಧರಿಸಿ ಪರಿಗಣಿಸಲಾಗುತ್ತಿದೆ. ರಾಜ್ಯದಲ್ಲಿ 2014-15 ರಲ್ಲಿ ಮಾನವ ಅಭಿವೃದ್ಧಿ ವರದಿಯನ್ನು ತಯಾರಿಸಿದ್ದು ಈಗ 10 ವರ್ಷಗಳ ನಂತರ ವರದಿ ತಯಾರಿಕೆ ಮಾಡಲಾಗುತ್ತಿದೆ ಎಂದರು.
ಕ್ರಿಮ್ಸ್ ನ ಡೀನ್ ಡಾ.ಪೂರ್ಣಿಮಾ, ಜಿಪಂ ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಯೋಜನಾ ನಿರ್ದೇಶಕ ಕರೀಂ ಅಸದಿ, ಮುಖ್ಯ ಯೋಜನಾಽಕಾರಿ ಸೋಮಶೇಖರ್ ಮೇಸ್ತ, ಸಂಪನ್ಮೂಲ ವ್ಯಕ್ತಿಗಳಾದ ಧಾರವಾಡ ಸಿಎಂಡಿಆರ್,ಅರ್ಥಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ವಿ. ಹನಗೋಡಿಮಠ ಮತ್ತು ಡಾ.ನಾರಾಯಣ ಬಿಲ್ಲವ ಇದ್ದರು.