ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಸಭೆ ನಡೆಸಿದರು.
ಕಾರವಾರ : ಜಿಲ್ಲೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾಯಂ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಲ್ಲಿ ಮನೆಗಳನ್ನು ಒದಗಿಸುವಂತೆ ಜಿಲ್ಲಾಽಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ನಿರ್ಮಿಸಿಉತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಸಂಬAಧ ಪಟ್ಟ ತಹಸೀಲ್ದಾರ್‌ಗಳಿಗೆ ಸೂಚಿಸಿ ಕಂದಾಯ ಭೂಮಿ ಗುರುತಿಸಿ ಕಂದಾಯ ಭೂಮಿ ಲಭ್ಯವಾಗದೇ ಹೋದಲ್ಲಿ ಪರ್ಯಾಯ ಭೂಮಿ ಗುರುತಿಸಿ ಎಂದು ಆದೇಶಿಸಿದರು.
ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ ಹೋಲ್ ಗಳನ್ನು ಕಾರ್ಮಿಕರಿಂದ ಸ್ವಚ್ಛಗೊಳಿಸದೇ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳನ್ನು ಬಳಸಬೇಕು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ದಿನಾಂಕದAದು ವೇತನ ಪಾವತಿಯಾಗಬೇಕು. ಇಎಸ್‌ಐ ಮತ್ತು ಇಪಿಎಫ್ ನಿಗದಿತವಾಗಿ ಕಡಿತವಾಗುತ್ತಿರುವ ಬಗ್ಗೆ ಕಾರ್ಮಿಕ ಇಲಾಖೆ ಅಽಕಾರಿಗಳು ಪರಿಶೀಲಿಸಬೇಕು. ಕರ್ತವ್ಯ ಸಮಯದಲ್ಲಿ ಸುರಕ್ಷಾ ಪರಿಕರಗಳನ್ನು ತಪ್ಪದೇ ಬಳಸುವ ಕುರಿತಂತೆ ಪೌರ ಕಾರ್ಮಿಕರಿಗೆ ನಿರ್ದೇಶನ ನೀಡಬೇಕು.ಅವರಿಗೆ ನಿಗದಿತ ಸಮಯದಲ್ಲಿ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಮಾಸ್ಟರ್ ಹೆಲ್ತ್ ಚೆಕಪ್ ಗಳನ್ನು ಕಡ್ಡಾಯವಾಗಿ ಮಾಡಿಸಬೇಕು ಎಂದರು. ಜಿಪಂ ಸಿಇಒ ಡಾ.ದಿಲೀಶ್ ಶಶಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ವೈ.ಕೆ ಇದ್ದರು.
ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪ ಯೋಜನೆಯಡಿ ಎಲ್ಲ ಇಲಾಖೆಗಳಲ್ಲಿ ಇಲಾಖೆಗಳಿಗೆ ನಿಗದಿಪಡಿಸಿದ ಗುರಿಯನ್ನು ಶೇ.100 ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಬುಧವಾರ ಪ.ಜಾತಿ ಉಪ ಹಂಚಿಕೆ ಮತು ಗಿರಿಜನ ಉಪ ಹಂಚಿಕೆ ಯೋಜನೆಯ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫೆೆಬ್ರವರಿ ಅಂತ್ಯದೊಳಗೆ ಎಲ್ಲ ಇಲಾಖೆಗಳು ತಮಗೆ ನೀಡಿರುವ ಗುರಿಯನ್ನು ಸಾಽಸಿ ಎಂದರು. ಗುರಿ ತಲುಪುವಲ್ಲಿ ವಿಫಲವಾದಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಎಚ್ಚರಿಸಿದರು.