ನಿತ್ಯ ಬೆಳಗ್ಗೆ ಹುಬ್ಬಳ್ಳಿಗೆ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಪ್ರಯಾಣಿಕರು, ನೌಕರರು ಹಾಗೂ ವಿದ್ಯಾರ್ಥಿಗಳು ಮುಂಡಗೋಡ ಬಸ್ ನಿಲ್ದಾಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. 
ಉತ್ತರ ಕನ್ನಡ

ಬೆಳಗ್ಗೆ ಹುಬ್ಬಳ್ಳಿಗೆ ಸಾರಿಗೆ ಸೌಲಭ್ಯ (transportation facilities) ಕಲ್ಪಿಸಲಿ

ಪ್ರಮುಖ ಮುಖ್ಯಾಂಶಗಳು

  • ಮುಂಡಗೋಡ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ
  • ಪ್ರತಿಭಟನಾಕಾರರ ಸಮಸ್ಯೆ ಆಲಿಸಿದ ಅಧಿಕಾರಿ
  • ಬೆಳಗ್ಗೆ ಎರಡು ಬಸ್ ಬಿಡುವ ಭರವಸೆ
ಮುಂಡಗೋಡ: ಸ್ಥಳೀಯ ಸಾರಿಗೆ ಘಟಕದಿಂದ ಬೆಳಗ್ಗೆ ಹುಬ್ಬಳ್ಳಿಗೆ ಸಾರಿಗೆ ಸೌಲಭ್ಯ(transportation facilities) ಕಲ್ಪಿಸಬೇಕು ಎಂದು ನೌಕರರು, ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಹುಬ್ಬಳ್ಳಿಗೆ ಹೋಗುವ ಬಸ್‌ಗಳನ್ನು ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.
ಪ್ರತಿದಿನ ಬೆಳಗ್ಗೆ ಹುಬ್ಬಳ್ಳಿಗೆ ತೆರಳಲು ಸಮರ್ಪಕ ಬಸ್ ಸೌಲಭ್ಯ ಇಲ್ಲ. ಇದರಿಂದಾಗಿ ಪ್ರಯಾಣಿಕರು, ನೌಕರರು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಾಲೂಕಿನಲ್ಲಿ ಸಾರಿಗೆ ಘಟಕ ಕಾರ್ಯಾರಂಭ ಆರಂಭವಾಗಿದ್ದರೂ ಈವರೆಗೂ ಹುಬ್ಬಳ್ಳಿ ಮಾರ್ಗದಲ್ಲಿ ಯಾವುದೇ ಬಸ್ ಬಿಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಷಯ ತಿಳಿದು ಪ್ರತಿಭಟನಾ ಸ್ಥಳಕ್ಕೆ ಬಂದ ಸಾರಿಗೆ ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ನಂತರ ಹುಬ್ಬಳ್ಳಿಗೆ ಮುಂಡಗೋಡ ಸಾರಿಗೆ ಘಟಕದಿಂದ ಬೆಳಗ್ಗೆ ಎರಡು ಬಸ್‌ಗಳನ್ನು ಬಿಡಲಾಗುವುದು ಎಂದು ಭರವಸೆ ನೀಡಿದರು.
ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.