ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಪರಿಣಾಮ ಭಟ್ಕಳದ ರಸ್ತೆ ಬದಿಯಲ್ಲಿ ಕಾಲುವೆಯಂತೆ ಮಳೆ ನೀರು ನಿಂತಿರುವುದು.
ಭಟ್ಕಳ: ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ತಾಂತ್ರಿಕ ಮಾನದಂಡಗಳಿಗೆ ಅನುಗುಣವಾಗಿ ವೈಜ್ಞಾನಿಕವಾಗಿ ನಿರ್ವಹಿಸದೇ, ಅರ್ಧಂರ್ಬಧ ರೀತಿಯಲ್ಲಿ ಕೈಗೊಂಡಿದ್ದು ಚರಂಡಿಯ ಮಲಿನ ನೀರು ಅಂಗಡಿಯೊಳಗೆ ನುಗ್ಗಿ ಸಾವಿರಾರು ರೂಪಾಯಿಗಳ ನಷ್ಟ ಉಂಟಾಗುತ್ತಿದೆ ಎಂದು ತಾಲೂಕಿನ ಬಸ್ತಿಯ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ಅಪೂರ್ಣ ಹಾಗೂ ಕಳಪೆಯಾಗಿದ್ದರಿಂದ ಮಳೆ ನೀರು ರಸ್ತೆಯ ಮೇಲೇ ನಿಂತು ಸುತ್ತಮುತ್ತಲಿನ ಅಂಗಡಿಗಳು ಹಾಗೂ ಗೋದಾಮುಗಳಿಗೆ ನುಗ್ಗಿ ಹಾನಿ ಉಂಟುಮಾಡುತ್ತಿದೆ. ಮಳೆ ನೀರು ಸರಿಯಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದಿರುವುದರಿಂದ ವ್ಯಾಪಾರಸ್ಥರಿಗೆ ಆಥಿರ್ಕ ನಷ್ಟ ಉಂಟಾಗುತ್ತಿದ್ದು, ಸಾರ್ವಜನಿಕರು ಸಹ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿ ಸಂಬಂಧಿಸಿದ ಅಧಿಕಾರಿಗಳ ನಿರ್ಲ್ಯವನ್ನು ಬಯಲಿಗೆಳೆಯುತ್ತಿದೆ ಎಂದು ಸ್ಥಳಿಯ ಉದ್ಯಮಿ ಕಿರಣ ಕಾಯ್ಕಿಣಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕಳಪೆ ಕಾಮಗಾರಿಗೆ ಜಿಲ್ಲಾಧಿಕಾರಿ ಅವರು ಸ್ಪಷ್ಟ ಉತ್ತರ ನೀಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಈ ರೀತಿಯಾಗಿ ಅಪೂರ್ಣವಾಗಿ ನಡೆಸಿ ಜನರಿಗೆ ಸಂಕಷ್ಟ ಉಂಟುಮಾಡಿರುವುದು ಸರಿಯಲ್ಲ. ಎನ್ಎಚ್ಎಐ ತಮ್ಮ ತಪ್ಪನ್ನು ಒಪ್ಪಿಕೊಳ್ಳುವ ಬದಲು ಇತರರ ಮೇಲೆ ಹೊಣೆ ಹೊರಿಸಿ ಜಾರಿಕೊಳ್ಳುತ್ತಿದೆ. ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಣ ಮಧ್ಯಪ್ರವೇಶಿಸಿ ಕಾಮಗಾರಿಯನ್ನು ವೈಜ್ಞಾನಿಕ ಹಾಗೂ ಇಂಜಿನಿಯರಿಂಗ್ ಮಾನದಂಡಗಳಿಗೆ ಅನುಗುಣವಾಗಿ ಸರಿಪಡಿಸಿ, ಸಾರ್ವಜನಿಕರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.