ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸಭೆ ನಡೆಸಿದರು.
- ಎಸ್‌ಸಿ, ಎಸ್‌ಟಿ ಸಮಿತಿ ಸಭೆ
- ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶ
ಕಾರವಾರ: ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆರ್.ಡಿ. ಸಂಖ್ಯೆ ಹೊಂದಿರುವ ಜಾತಿ ಪ್ರಮಾಣ ಪತ್ರಗಳನ್ನು ಮಾತ್ರ ಮೀಸಲಾತಿಗೆ ಪರಿಗಣಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರ್‌ಡಿ ಸಂಖ್ಯೆ ಇಲ್ಲದ ಹಳೆಯ ಕೈ ಬರಹದ ಜಾತಿ ಪ್ರಮಾಣಪತ್ರವನ್ನು ಈಗ ಪರಿಗಣಿಸಬಾರದು ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಪ.ಜಾತಿ ಮತ್ತು ಪಂಗಡದ ಯೋಜನೆಗಳ ಅನುದಾನದಿಂದ ಕೈಗೊಂಡ ಕಾಮಗಾರಿಗಳ ಪರಿಶೀಲನೆಗೆ ಸತ್ಯಶೋಧನಾ ಸಮಿತಿ ರಚಿಸಬೇಕು ಎಂದು ಆದೇಶ ಮಾಡಿದರು. ಸಮುದಾಯದ ಜನತೆಯ ಜಾಗ ಒತ್ತುವರಿ ಸಮಸ್ಯೆಗಳನ್ನು ಆದ್ಯತೆಯಲ್ಲಿ ಬಗೆಹರಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಸಮಿತಿಯ ಸದಸ್ಯರು ಮನವಿ ಮಾಡಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಽಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಕಾರಿ ಶಾಲಂ ಹುಸೇನ್, ಎಎಸ್‌ಪಿ ಕೃಷ್ಣಮೂರ್ತಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಸಭೆಯಲ್ಲಿದ್ದರು.
ಪೌರ ಕಾರ್ಮಿಕರಿಗೆ ನಿಗದಿತ ಅವಧಿಯಲ್ಲಿ ವೇತನ ಪಾವತಿಸಿ
ಜಿಲ್ಲೆಯಲ್ಲಿನ ಎಲ್ಲ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನೀಡಲಾಗುವ ಸೌಲಭ್ಯಗಳಲ್ಲಿ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಜಿಲ್ಲಾಽಕಾರಿ ಕೆ.ಲಕ್ಷ್ಮೀಪ್ರಿಯಾ ಆದೇಶಿಸಿದರು.
ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗತ ದಿನಾಂಕದಂದು ವೇತನ ಪಾವತಿಯಾಗಬೇಕು, ಇಎಸ್‌ಐ ಮತ್ತು ಇಪಿಎಫ್ ನಿಗತವಾಗಿ ಕಡಿತವಾಗುತ್ತಿರುವ ಬಗ್ಗೆ ಕಾರ್ಮಿಕ ಇಲಾಖೆ ಅಕಾರಿಗಳು ಪರಿಶೀಲಿಸಬೇಕು ಎಂದರು. ಜಿ.ಪಂ. ಉಪ ಕಾರ್ಯದರ್ಶಿ ಎಂ.ಎಸ್. ಅಲ್ಲಾಕ್ಷ್ ಸೇರಿ ಇತರ ಅಧಿಕಾರಿಗಳಿದ್ದರು.