ಶೋಟೋಕಾನ್ ಕರಾಟೆ karate ಇನ್‌ಸ್ಟಿಟ್ಯೂಟ್ ಆಶ್ರಯದಲ್ಲಿ ಆಯೋಜಿಸಿದ್ದ 13ನೇ ಬ್ಲ್ಯಾಕ್ ಬೆಲ್ಟ್ ವಿತರಣೆ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ಕರಾಟೆ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಭಟ್ಕಳ: ಮನೋನಿಗ್ರಹ, ಆತ್ಮರಕ್ಷಣೆಗೆ ಮಾರ್ಷಲ್ ಆರ್ಟ್ಸ್ ಸಹಕಾರಿ ಎಂದು ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಡಾ. ಪುಷ್ಪಲತಾ ಮಂಕಾಳ ವೈದ್ಯ ಹೇಳಿದರು.
ಶ್ರೀ ಕುದುರೆ ಬೀರಪ್ಪ ದೇವಸ್ಥಾನದ ಸಭಾಭವನದಲ್ಲಿ ಭಟ್ಕಳ ಶೋಟೋಕಾನ್ ಕರಾಟೆ ಇನ್‌ಸ್ಟಿಟ್ಯೂಟ್ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ 13ನೇ ಬ್ಲ್ಯಾಕ್ ಬೆಲ್ಟ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕರಾಟೆ karate ಆತ್ಮರಕ್ಷಣೆಯೊಂದಿಗೆ ಏಕಾಗ್ರತೆಯನ್ನು ಕಲಿಸುತ್ತದೆ ಎಂದು ಹೇಳಿದರು.
ಡಾ. ರವಿ ನಾಯ್ಕ ಮಾತನಾಡಿ, ಬ್ಲಾೃಕ್ ಬೆಲ್ಟ್ ಪಡೆದ ವಿದ್ಯಾರ್ಥಿಗಳು ಈ ಕಲೆಯನ್ನು ಆತ್ಮ ರಕ್ಷಣೆ ಹಾಗೂ ಇತರರು ಕಷ್ಟದಲ್ಲಿ ಸಿಲುಕಿದಾಗ ಅವರ ರಕ್ಷಣೆಗೆ ಉಪಯೋಗಿಸಬೇಕು ಎಂದರು.
ಜನತಾ ಕೋ. ಆಫ್ ಸೊಸೈಟಿ ನಿರ್ದೇಶಕ ರಾಮಚಂದ್ರ ಕಿಣಿ ಮಾತನಾಡಿ, ದಿ. ವಾಸು ನಾಯ್ಕ ಅವರಿಂದ ಆರಂಭಗೊಂಡ ಈ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ.
ಅವರ ಪುತ್ರ ಆರ್ಯನ ಹಾಗೂ ಸಂಘದ ಅಧ್ಯಕ್ಷ ಸುರೇಶ ಮೊಗೇರ ನೇತೃತ್ವದಲ್ಲಿ ನೂರಾರು ಮಕ್ಕಳಿಗೆ ಈ ಸಮರ ಕಲೆಯನ್ನು ಕಲಿಸಿ ಅವರ ಆತ್ಮಗೌರವವನ್ನು ಹೆಚ್ಚಿಸುವಂತೆ ಮಾಡಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜ್‌ನ ಡಾ. ವೀರೇಂದ್ರ ಶಾನಭಾಗ ಮಾತನಾಡಿದರು. ಭಟ್ಕಳ ಶೋಟೋಕಾನ್ ಕರಾಟೆ ಇನ್‌ಸ್ಟಿಟ್ಯೂಟ್ ಅಧ್ಯಕ್ಷ ಸುರೇಶ ಮೊಗೇರ, ಶ್ರೀ ಕುದುರೆ ಬೀರಪ್ಪ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಶಂಕರ ನಾಯ್ಕ ಇದ್ದರು.
ಬ್ಲ್ಯಾಕ್ ಬೆಲ್ಟ್ ಮುಖ್ಯ ಪರೀಕ್ಷಕ ಹನ್ಸಿ ಸಿ. ರಾಜನ್ 30 ವಿದ್ಯಾರ್ಥಿಗಳಿಗೆ ಬೆಲ್ಟ್ ವಿತರಿಸಿದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಶ್ರೀ ಕುದುರೆ ಬೀರಪ್ಪ ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಡಾ. ಪುಷ್ಪಲತಾ ಮಂಕಾಳ ವೈದ್ಯ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿನಿ ನಿಧಿ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿನಿ ಸಿಂಧು ಅರೇರ, ಶಿಕ್ಷಕ ನಾಗರಾಜ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಆರ್ಯನ ನಾಯ್ಕ, ಗೋಪಾಲ ನಾಯ್ಕ ಇತರರಿದ್ದರು.