ಕಾರವಾರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರನ್ನು ಸನ್ಮಾನಿಸಲಾಯಿತು. 
ಉತ್ತರ ಕನ್ನಡ

ಕಾರವಾರದಲ್ಲಿ ಕ್ರೀಡಾಂಗಣ ನಿರ್ಮಿಸಿ : ಜಿಲ್ಲಾಡಳಿತಕ್ಕೆ ಅಂತಾರಾಷ್ಟ್ರೀಯ ಕ್ರೀಡಾಪಟು ಮನವಿ

ಪ್ರಮುಖ ಮುಖ್ಯಾಂಶಗಳು

  • ಕಾರವಾರದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರಿಗೆ ಸನ್ಮಾನ
  • ಕ್ರೋಡಾಂಗಣವಿಲ್ಲದೇ ಕ್ರೀಡಾಪಟುಗಳಿಗೆ ತೊಂದರೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮಕ್ಕಳಿಗೆ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಪ್ರತಿಭೆ ಇದ್ದು, ಅವರಿಗೆ ಅಭ್ಯಾಸ ಮಾಡಲು ಕಾರವಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಸುಸಜ್ಜಿತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಮನವಿ ಮಾಡಿದರು.
ಚೀನಾದಲ್ಲಿ ಇತ್ತೀಚೆಗೆ ನಡೆದ 23 ವರ್ಷದೊಳಗಿನ ಅಥ್ಲೆಟಿಕ್ ಚಾಂಪಿಯನ್ ಶಿಪ್ ನ 5000 ಮತ್ತು 10000 ಮೀ ನಲ್ಲಿ ಬೆಳ್ಳಿ ಪದಕ ಪಡೆದು ಬಂದ ಅವರನ್ನು ಹಾಗೂ ಅವರ ಕೋಚ್‌ ಪ್ರಕಾಶ ರೇವಣಕರ್‌ ಅವರನ್ನು ಜಿಲ್ಲಾಡಳಿತದ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕಾರ್ಯಕ್ರಮ ಆಯೋಜನೆಯಾಗಿದ್ದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಸತತ ಪ್ರಯತ್ನ, ಕಠಿಣ ಪರಿಶ್ರಮ ಮತ್ತು ತಾಳ್ಮೆಯಿಂದ ಸಾಧನೆಗಳನ್ನು ಮಾಡಲು ಸಾಧ್ಯವಾಗಲಿದೆ. ಮುಂದಿನ ದಿನಗಳಲ್ಲಿ ಕಾಮನ್ ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಒಲಂಪಿಕ್ಸ್ ನಲ್ಲಿ ಪದಕ ಪಡೆಯುವ ಗುರಿಯನ್ನು ಹೊಂದಿದ್ದು, ಜಿಲ್ಲೆಗೆ ಮತ್ತು ದೇಶಕ್ಕಾಗಿ ಇನ್ನೂ ಉತ್ತಮ ಸಾಧನೆ ಮಾಡುತ್ತೇನೆ ಎಂದರು. ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ.ದಿಲೀಶ್ ಶಶಿ, ಎಸ್‌ಪಿ ದೀಪನ್ ಎಂ.ಎನ್. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಇದ್ದರು.