- ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲಿ ನಿಧನ
ಹೊನ್ನಾವರ: ಯಕ್ಷಗಾನ ಕ್ಷೇತ್ರದಲ್ಲಿ ಕಾಸರಕೋಡು ಎಂದೇ ಪ್ರಸಿದ್ದರಾಗಿರುವ ಯಕ್ಷಗಾನ ಹಾಸ್ಯ ಕಲಾವಿದ ಶ್ರೀಧರ ಭಟ್ ಕಾಸರಕೋಡ (52) ಶುಕ್ರವಾರ ನಿಧನರಾದರು. ಅನಾರೋಗ್ಯದಲ್ಲಿದ್ದ ಅವರನ್ನು ಶುಕ್ರವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಗೆ ಕರೆದೋಯ್ಯುತ್ತಿದ್ದಾಗ ದಾರಿ ಮದ್ಯೆ ಶಿರೂರು ಚೆಕ್ ಪೋಸ್ಟ್ ಹತ್ತಿರ ಉಸಿರು ನಿಲ್ಲಿಸಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಅಭಿಮಾನಿಗಳಿದ್ದಾರೆ.
ಸುಮಾರು ಮೂರು ದಶಕಗಳ ಕಾಲ ಗುಂಡಬಾಳ, ಮಂದಾರ್ತಿ, ಸಾಲಿಗ್ರಾಮ, ಪೆರಡೂರು, ಜಲವಳ್ಳಿ ಸೇರಿದಂತೆ ವಿವಿಧ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದರು. ಹಾಸ್ಯ ಪಾತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಶೈಲಿಯನ್ನು ಹೊಂದಿದ್ದ ಅವರ ಚಂದ್ರಾವಳಿ ವಿಲಾಸದ ಅಜ್ಜಿಯ ಪಾತ್ರವು ಅಪಾರ ಜನಪ್ರಿಯತೆ ಗಳಿಸಿದೆ.