ವಿದ್ಯಾರ್ಥಿಗಳು ಪತ್ರ ಬರೆದರು.  
ಉತ್ತರ ಕನ್ನಡ

ಎಸ್‌ಐಆರ್‌ ಕುರಿತು ವಿದ್ಯಾರ್ಥಿಗಳಿಂದ ಪಾಲಕರಿಗೆ ಪತ್ರ

ಸುಭಾಸ ಹೆಗಡೆ ಧೂಪದಹೊಂಡ

ಪ್ರಮುಖ ಮುಖ್ಯಾಂಶಗಳು

  • ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮನವಿ
ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ - 2026 (ಎಸ್.ಆಯ್.ಆರ್.) ಅಂಗವಾಗಿ
ನಗರದ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ , ವಸತಿ ನಿಲಯದ ವಿದ್ಯಾರ್ಥಿನಿಯರಿಂದ ಪಾಲಕರಿಗೆ ಪತ್ರ ಅಭಿಯಾನ ಕಾರ್ಯಕ್ರಮವನ್ನು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕು ಸ್ವೀಪ್ ನೋಡಲ್ ಅಧಿಕಾರಿ ಟಿ.ವಾಯ್.
ದಾಸನಕೊಪ್ಪ ಹಾಗೂ ತಹಶಿಲ್ದಾರ ಎ.ಎಸ್. ಪ್ರಸಾದ್ ಶುಕ್ರವಾರ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವ ರಾಷ್ಟç ಮತ್ತು ಮತದಾನದ ಹಕ್ಕಿನ ಬಗ್ಗೆ ಮಕ್ಕಳಿಗೆ ಸರಳವಾಗಿ ಅರ್ಥವಾಗುವಂತೆ ಮಾರ್ಗದರ್ಶನ ಮಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ನೀಡಲಾಗುತ್ತಿರುವ ಎರಡು ಗಣತಿ ನಮೂನೆಗಳನ್ನು ಭರ್ತಿ ಮಾಡಿ, ಒಂದನ್ನು ಜುಲೈ 29ರ ರೊಳಗಾಗಿ ಬಿಎಲ್‌ಒ ಗಳಿಗೆ ಹಿಂದಿರುಗಿಸಿ, ಒಂದನ್ನು ತಮ್ಮ ಬಳಿ ಇರಿಸಿಕೊಳ್ಳುವಂತೆ ಎಲ್ಲ ಮಕ್ಕಳು ಪಾಲಕರಿಗೆ ಪತ್ರ ಬರೆಯುವಂತೆ ತಿಳಿಸಿ ಹೇಳಿದರು.
ತಹಶಿಲ್ದಾರ ಎ.ಎಸ್. ಪ್ರಸಾದ ಮಾತನಾಡಿ, ಮಕ್ಕಳು ಹೇಗೆ ಪತ್ರ ಆರಂಭಿಸಬೇಕು, ವಿಷಯವನ್ನು ಹೇಗೆ ಪ್ರಸ್ತಾಪಿಸಬೇಕು ಮತ್ತು ಎಸ್.ಆಯ್.ಆರ್. ಪ್ರಾಮುಖ್ಯತೆ ಬಗ್ಗೆ ತಿಳಿ ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿಯ ಯೋಜನಾ ಅಧಿಕಾರಿ ಚೋಳಪ್ಪ ಬಣಕಾರ, ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ಬಾಲೇಶ್ ಸಿದ್ದಯ್ಯನವರ, ವಾರ್ಡನ್ ಶಿವಲೀಲಾ ಘಂಟಾಮಠ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.