ಹೆದ್ದಾರಿಯಲ್ಲಿ ಲಾರಿ ಹೊತ್ತಿ ಉರಿಯಿತು.
ಯಲ್ಲಾಪುರ: ಸ್ಪಿರಿಟ್ ತುಂಬಿದ ಟ್ಯಾಂಕರ್ ಹೊತ್ತಿ ಹರಿದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಅರಬೈಲ್ ಘಟ್ಟದ ಮಾರುತಿ ದೇವಸ್ಥಾನದ ಬಳಿ ನಡೆದಿದೆ. ಸ್ಪಿರಿಟ್ ತುಂಬಿದ ಟ್ಯಾಂಕರ್ ಅರಬೈಲ್ ಬಳಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿಗೆ ಬೆಂಕಿ ಹೊತ್ತಿಕೊಂಡು ಜೋರಾಗಿ ಉರಿಯಲಾರಂಭಿಸಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ಆರಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಾರಿ ಸಂಪೂರ್ಣ ಸುಟ್ಟು ಹೋಗಿತ್ತು. ಲಾರಿಯ ಚಾಲಕ ಆಂಧ್ರಪ್ರದೇಶದ ಕರನೂಲ್ ನ ಶ್ರೀನಿವಾಸ ರೆಡ್ಡಿ ಅಪಾಯದಿಂದ ಪಾರಾಗಿದ್ದಾರೆ.