ಹವಾಮಾನ ಬದಲಾವಣೆ ಕ್ರಿಯಾ ಯೋಜನೆಯ ಕಾರ್ಯಾಗಾರವನ್ನು ಸೋಮಶೇಖರ ಮೇಸ್ತ ಉದ್ಘಾಟಿಸಿದರು.
ಕಾರವಾರ: ಹವಾಮಾನದಲ್ಲಿ ಉಂಟಾಗುವ ಬದಲಾವಣೆಗಳನ್ನು ನಿಯಂತ್ರಿಸಿ, ಪರಿಸರದಲ್ಲಿ ಸಮತೋಲನ ಕಾಪಾಡುವ ಕಾರ್ಯದಲ್ಲಿ ಅಧಿಕಾರಿಗಳ ಪಾತ್ರವು ಅತ್ಯಂತ ಪ್ರಮುಖವಾದದ್ದು ಎಂದು ಜಿ.ಪಂ. ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಹೇಳಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ)
ವತಿಯಿಂದ, ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕುರಿತು ಕ್ರಿಯಾ ಯೋಜನೆ ತಯಾರಿಸುವ ಕುರಿತಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಹವಾಮಾನ ವೈಪರೀತ್ಯದಿಂದ ಉಂಟಾಗುತ್ತಿರುವ ಜಾಗತಿಕ ತಾಪಮಾನ ಏರಿಕೆ, ಅತಿವೃಷ್ಠಿ, ಬರಗಾಲ, ವಾಯು ಮಾಲಿನ್ಯ,
ಅರಣ್ಯ, ಸಮುದ್ರ ಹಾಗೂ ವನ್ಯಜೀವಿಗಳ ನಾಶದಂತಹ ಪರಿಸ್ಥಿತಿಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬAಧಪಟ್ಟ ಇಲಾಖೆಗಳ
ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ನಿಯಂತ್ರಣ ಕ್ರಮಗಳ ಕುರಿತಂತೆ ಕ್ರಿಯಾ ಯೋಜನೆಯನ್ನು ರೂಪಿಸಿ, ಅದನ್ನು ಸಮರ್ಪಕವಾಗಿ ಜಾರಿಗೊಳಿಸುವ ಅತ್ಯಂತ ಮಹತ್ವದ ಜವಾಬ್ದಾರಿ ಅಧಿಕಾರಿಗಳಿಗಿದೆ ಎಂದರು.
ಕಾರ್ಯಗಾರದಲ್ಲಿ ಎಂಪ್ರಿ ಸಂಸ್ಥೆಯ ಹವಾಮಾನ ಬದಲಾವಣೆ ವಿಭಾಗದ ಹಿರಿಯ ಸಮಾಲೋಚಕಿ ಡಾ.ಬಿ.ಸರಿತಾ,
ಹವಾಮಾನ ಬದಲಾವಣೆ ಕುರಿತು ಕರ್ನಾಟಕ ಕ್ರಿಯಾ ಯೋಜನೆ ಬಗ್ಗೆ ಮತ್ತು ಕಾರ್ಯ ನೀತಿ, ಕಾರ್ಯಕ್ರಮಗಳು ಹಾಗೂ ವಿವಿಧ
ಇಲಾಖೆಗಳ, ಸಂಘ ಸಂಸ್ಥೆಗಳ ಕರ್ತವ್ಯಗಳನ್ನು ತಿಳಿಸಿ, ಅಲ್ಪಾವಧಿಯ ಹವಾಮಾನ ಮಾಲಿನ್ಯಕಾರಕಗಳ ಪರಿಣಾಮಗಳು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವುಗಳ ದತ್ತಾಂಶಗಳ ಕುರಿತು ಮಾಹಿತಿ ನೀಡಿದರು. ಕೆನಡಾದ ಯೂನಿವರ್ಸಿಟಿ ಆಫ್ ವಿನ್ನಪೆಗ್ ನ ಪರಿಸರ ವಿಜ್ಞಾನ ವಿಭಾಗದ ಸಂಶೋಧನಾ ವಿಜ್ಞಾನಿ ಡಾ.ಮಹಾಬಲೇಶ್ವರ ಹೆಗಡೆ,
ಕಾರ್ಬನ್ ಕ್ರೆಡಿಟ್ ಸ್ಕೋರ್, ಹವಾಮಾನ ಬದಲಾವಣೆ ಉಪಕ್ರಮಗಳು, ಪ್ಯಾರಿಸ್ ಒಪ್ಪಂದದ ಕುರಿತು ವಿವರಿಸಿದರು. ಜಲ ಸಂಪನ್ಮೂಲ ಇಲಾಖೆಯ ನಿರ್ದೇಶಕ ಡಾ.ಸೋಮಶೇಖರ ರಾವ್, ಜಲ ಸಂಪನ್ಮೂಲದ ಬಗ್ಗೆ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ಕುರಿತು ಆನ್‌ಲೈನ್ ಮೂಲಕ ಭಾಗವಹಿಸಿ ಮಾಹಿತಿ ನೀಡಿದರು.
ಜಿಲ್ಲೆಯ ಅರಣ್ಯ, ಕೃಷಿ, ತೋಟಗಾರಿಕೆ, ಪಶುಪಾಲನೆ, ಸಣ್ಣ ನೀರಾವರಿ, ಮೀನುಗಾರಿಕೆ, ಆರೋಗ್ಯ ಇಲಾಖೆ, ಕೈಗಾರಿಕೆ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್ ಉಪಸ್ಥಿತರಿದ್ದರು. ಎಂಪ್ರಿ ಸಂಸ್ಥೆಯ ತರಬೇತಿ ಮುಖ್ಯಸ್ಥೆ ಲತಾ ಸ್ವಾಗತಿಸಿ,