ಕಾರವಾರದ ಕ್ರಿಮ್ಸ್‌ನಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಶಾಸಕ ಸತೀಶ ಸೈಲ್ ಉದ್ಘಾಟಿಸಿದರು. ಎಂಎಲ್‌ಸಿ ಗಣಪತಿ ಉಳ್ವೇಕರ್, ಜಿಪಂ ಸಿಇಒ ಡಾ.ದಿಲೀಶ ಶಶಿ ಇದ್ದರು.  
ಉತ್ತರ ಕನ್ನಡ

ಜಿಲ್ಲೆಯ 1.4 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

ಕಾರವಾರ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಉದ್ಘಾಟನೆಯನ್ನ ಕ್ರಿಮ್ಸ್ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಲಾಗಿತ್ತು. ಕೆಎಸ್‌ಎಂಸಿಎ ಚೇರ್ಮನ್ ಹಾಗೂ ಶಾಸಕ ಸತೀಶ ಕೆ. ಸೈಲ್, ಎಂಎಲ್‌ಸಿ ಗಣಪತಿ ಉಳ್ವೇಕರ್ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಿಪಂ ಸಿಇಒ ಡಾ.ದಿಲೀಶ್ ಶಶಿ, ಕ್ರಿಮ್ಸ್ ನಿರ್ದೇಶಕಿ ಡಾ.ಪೂರ್ಣಿಮಾ, ವೈದ್ಯಕೀಯ ಅಧೀಕ್ಷಕ ಡಾ.ನರೇಶ ಪಾವಸ್ಕರ್, ಜಿಲ್ಲಾ ಶಸ ಚಿಕಿತ್ಸಕ ಡಾ.ಗಣೇಶ, ಕಮ್ಯೂನಿಟಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ.ಹೇಮಗೀರಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ ಮಾಚಕ್ಕನವರ್, ಮಾನಸಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ವಿಜಯರಾಜ್, ಜಿಲ್ಲಾ ಆರ್‌ಸಿಎಚ್ ಅಕಾರಿ ಡಾ.ನಟರಾಜ, ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ವಿ.ಎಂ. ಹೆಗಡೆ, ರೋಟರಿ ಸಂಸ್ಥೆಯ ಅಧ್ಯಕ್ಷ ಡಾ.ಅರ್ಜುನ ಉಪಾಧ್ಯಾಯ ಇದ್ದರು.
1.4 ಲಕ್ಷ ಮಕ್ಕಳು: ಜಿಲ್ಲೆಯಲ್ಲಿ 5 ವರ್ಷದೊಳಗಿನ 1.4,ಲಕ್ಷ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ 878 ಬೂತ್‌ಗಳನ್ನು ತೆರೆಯಲಾಗಿದೆ. 33 ಟ್ರಾನ್ಸಿಸ್ಟ್ ತಂಡ, 9 ಸಂಚಾರಿ ಲಸಿಕಾ ತಂಡಗಳ ವ್ಯವಸ್ಥೆ ಮಾಡಲಾಗಿದೆ. 3591 ಲಸಿಕೆ ಹಾಕುವವರು ಹಾಗೂ 200 ಮೇಲ್ವಿಚಾರಕರನ್ನು ನೇಮಿಸಲಾಗಿದೆ.