ಜಿಲ್ಲೆ

ಯುವಿಸಿಇ: ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ (ಯುವಿಸಿಇ) ತಾಂತ್ರಿಕೇತರ ಹಾಗೂ ತಾಂತ್ರಿಕ ವಿಷಯಗಳನ್ನು ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಎಐಸಿಟಿಇ ಮತ್ತು ಯುಜಿಸಿ ನಿಯಮಾನುಸಾರ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಹಾಗೂ ಸಂಬಂಧಿತ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವೆಬ್‌ಸೈಟ್‌ಡಿಡಿಡಿ.್ಠಡ್ಚಛಿ.ಚ್ಚ.ಜ್ಞಿನಿಂದ ಡೌನ್‌ಲೋಡ್ ಮಾಡಿಕೊಂಡು, ಸಂಬಂಧಿತ ದಾಖಲೆಗಳ ಪ್ರತಿಯೊಂದಿಗೆ ಸೆ.4ರೊಳಗೆ ಅರ್ಜಿ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ವಿವಿಯು ಪ್ರಭಾರ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.