ಜಿಲ್ಲೆ

ವಾಲ್ಮೀಕಿ ಜಯಂತಿ ಆಚರಣೆ

Mangaluru - Hariprasad Rai



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಅವರು ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಬಸವರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಅಡಿಗ, ಮಂಗಳೂರು ದಕ್ಷಿಣ ಬಿಇಒ ಈಶ್ವರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.