ಗುಡವಿ ಗ್ರಾಮದಲ್ಲಿ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಗುರುಸ್ವಾಮಿ, ಡಾ. ಪ್ರದೀಪ್ ಕುಮಾರ, ಶಿವಲಿಂಗೇಗೌಡ ಇತರರಿದ್ದರು. 
ಜಿಲ್ಲೆ

ಜಾನುವಾರುಗಳಿಗೆ ಸಕಾಲಕ್ಕೆ ಲಸಿಕೆ ಹಾಕಿಸಿ

ಸೊರಬ: ಬಿಸಿಲು-ಮಳೆಗೆ ಜಾನುವಾರುಗಳ ಆರೋಗ್ಯದ ಮೇಲೆ ಬೀರಲಿದ್ದು ಎಚ್ಚರಿಕೆ ವಹಿಸುವಂತೆ ಪಶುವೈದ್ಯರಿಗೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ತಾಲೂಕಿನ ಗುಡವಿ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವ ಇಲಾಖೆಯಿಂದ ಹಮ್ಮಿಕೊಂಡಿದ್ದ ಮುಂಜಾಗೃತವಾಗಿ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿವರ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕುವುದರಿಂದ ಜಾನುವಾರುಗಳು ಮಾರಣಾಂತಿಕ ಕಾಯಿಲೆಯಿಂದ ಪಾರಾಗುತ್ತವೆ ಎಂದರು.
ಗ್ರಾಪಂ ಉಪಾಧ್ಯಕ್ಷೆ ಎಚ್.ಡಿ.ಲತಾ, ಸದಸ್ಯ ಗುರುಸ್ವಾಮಿ, ತಾಪಂ ಇಒ ಡಾ. ಪ್ರದೀಪ್ ಕುಮಾರ, ಪಶು ಆರೋಗ್ಯ ನೀರಿಕ್ಷಕ ಲೋಕನಾಯ್ಕ, ಜಿಪಂ ಮಾಜಿ ಸದಸ್ಯ ಶಿವಲಿಂಗೇಗೌಡ, ಸುನಿಲ್ ಗೌಡ್, ಪ್ರಮುಖರಾದ ಮೋಹನ್, ರಘುಪತಿ, ರವಿಮಾಸ್ತಪ್ಪ, ಗಿರೀಶ್, ಎಚ್.ಗಣಪತಿ, ಎಂ.ಡಿ.ಶೇಖರ್, ಸದಾನಂದಗೌಡ, ಹಿರಿಯಪ್ಪ ಕಲ್ಲಂಬಿ ಇತರರಿದ್ದರು.