ಶಿರಹಟ್ಟಿ ಪಟ್ಟಣದಲ್ಲಿ ಏರ್ಪಡಿಸಿದ್ದ ಇಂದ್ರಧನುಷ್ ಲಸಿಕೆ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಅನಿಲ ಬಡಿಗೇರ ಮಗವಿಗೆ ಲಸಿಕೆ ಹಾಕಿದರು. ಟಿಎಚ್‌ಒ ಡಾ. ಸುಭಾಸ ದೈಗೊಂಡ, ಡಾ.ವಿ.ಎಫ್. ಪಾಟೀಲ ಇದ್ದರು 
ಜಿಲ್ಲೆ

ಮಕ್ಕಳ ಆರೋಗ್ಯ ರಕ್ಷಣೆಗೆ ಲಸಿಕೆ ಅಗತ್ಯ

ಶಿರಹಟ್ಟಿ: ಮಗವಿಗೆ ಬಾಧಿಸುವ ರೋಗಗಳ ನಿರ್ಮೂಲನೆಗೆ ಲಸಿಕೆ ಪರಿಣಾಮಕಾರಿಯಾಗಿದೆ. ನಿಗದಿತ ಸಮಯದಲ್ಲಿ ಅವುಗಳನ್ನು ಹಾಕಿಸಿಸುವ ಅಗತ್ಯವಿದ್ದು, ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ತಾಯಂದಿರ ಪಾತ್ರ ಗಮನಾರ್ಹ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.

ಆರೋಗ್ಯ ಇಲಾಖೆಯಿಂದ ಪಟ್ಟಣದ ಕೆಳಗೇರಿ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಏರ್ಪಡಿಸಿದ್ದ ಪರಿಣಾಮಕಾರಿ ಇಂದ್ರಧನುಷ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಸುಭಾಸ ದೈಗೊಂಡ ಮಾತನಾಡಿ, ಮಕ್ಕಳಿಗೆ ವಿವಿಧ ಲಸಿಕೆಗಳ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಆರಂಭದಲ್ಲಿ ಇಂದ್ರಧನುಷ್ 5.0 ಅಭಿಯಾನ ಹಮ್ಮಿಕೊಂಡಿದ್ದು, ಈ ಸಂಬಂಧ ತಾಲೂಕಿನ 280 ಮಕ್ಕಳು ಮತ್ತು 52 ಗರ್ಭಿಣಿಯರಿಗೆ ಲಸಿಕೆ ನೀಡಲಾಗುತ್ತದೆ ಎಂದರು. ಎಂ. ಚೆನ್ನಮ್ಮನವರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ. ವಿ.ಎಫ್. ಪಾಟೀಲ, ಎಸ್.ಸಿ. ಹಿರೇಮಠ, ಅಂಗನವಾಡಿ ಶಿಕ್ಷಕಿ ರಮಾಬಾಯಿ ಧರ್ಮಾಧಿಕಾರಿ ಇದ್ದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಜಗದೀಶ ಕೋಡಿಹಳ್ಳಿ ಕಾರ್ಯಕ್ರಮ ನಿರ್ವಹಿಸಿದರು.