ಹುಬ್ಬಳ್ಳಿ : ಕರ್ನಾಟಕ ಸಾಮರಸ್ಯ ವೇದಿಕೆ, ಅರಿವು ಹಾಗೂ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಸಂಘಟನೆಗಳ ಸಹಯೋಗದಲ್ಲಿ ಆ. 7 ರಂದು ಸಂಜೆ 6 ಗಂಟೆಗೆ ವಚನ ದರ್ಶನ ಕೃತಿ ಲೋಕಾರ್ಪಣೆ ಕಾರ್ಯಕ್ರಮವನ್ನು ಇಲ್ಲಿನ ದೇಶಪಾಂಡೆ ನಗರದ ಸವಾಯಿ ಗಂಧರ್ವ ಹಾಲ್ನಲ್ಲಿ ಆಯೋಜಿಸಲಾಗಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ಉತ್ತರದ ಪ್ರಾಂತ ಕಾರ್ಯವಾಹರಾದ ರಾಘವೇಂದ್ರ ಕಾಗವಾಡ ಅವರು ಆಶಯ ಭಾಷಣ ಮಾಡುವರು. ಕೆಎಲ್ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ ಗೌರವ ಉಪಸ್ಥಿತಿ ಇರಲಿದ್ದು, ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.