ವಿಜಯವಾಣಿ ಸುದ್ದಿಜಾಲ ಧಾರವಾಡ
ಡಾ. ಫ.ಗು. ಹಳಕಟ್ಟಿ ಜನ್ಮದಿನ ನಿಮಿತ್ತ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನವನ್ನು ಜು. 2ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿರುವರು. ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರಾದ ಅಬ್ಬಯ್ಯ ಪ್ರಸಾದ, ಜೆ.ಎಂ.ಗಣೇಶ, ಎನ್.ಎಚ್ ಕೋನರಡ್ಡಿ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಎಸ್.ವಿ.ಸಂಕನೂರ, ಪ್ರದಿಪ ಶೆಟ್ಟರ ಅತಿಥಿಗಳಾಗಿ ಆಗಮಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು.
ಲಿಂಗಾಯತ ನೇಕಾರ ಸಮಾಜದ ಅಧ್ಯಕ್ಷ ಎಂ.ಸಿ. ಹೆಗಡಿ, ಈಶ್ವರ ಕಡ್ಲಿಮಟ್ಟಿ, ಬಸವರಾಜ ಕೊಂಗಿ, ಶಿವರಾಜ ಧಾರವಾಡ ಮತ್ತು ಸದಾನಂದ ಶಾಂತಪ್ಪ ಹಳಕಟ್ಟಿ ಉಪಸ್ಥಿತರಿರುವರು. ಡಾ. ಫ..ಗು.ಹಳಕಟ್ಟಿ ಜೀವನ ಹಾಗೂ ವಚನ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಕುರಿತು ಡಾ.ಬಾಳಣ್ಣ ಶೀಗಿಹಳ್ಳಿ ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.