ಜಿಲ್ಲೆ

ಅನಿಷ್ಟ ಪದ್ದತಿಗಳ ವಿರುದ್ಧ ಹೋರಾಡಿದ ವಚನಕಾರರು

Rest of Bengaluru - Chikkaballapura - Venkatesh

ಚಿಕ್ಕಬಳ್ಳಾಪುರ: 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿದ ವಚನಕಾರರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಪ್ರಮುಖರು. ಇವರು ವಚನ ವಿಚಾರಗಳು ಸಾರ್ವಕಾಲಿಕವಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸತಿ ಇಲಾಖೆಯು ಹಮ್ಮಿಕೊಂಡಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

12 ನೇ ಶತಮಾನದಲ್ಲಿ ಬಸವಣ್ಣ, ಅಲ್ಲಮಪ್ರಭು, ಹಡಪದ ಹಪ್ಪಣ್ಣ ಸೇರಿದಂತೆ ಅನೇಕ ವಚನಕಾರರು ಸಮಾಜದ ಸುಧಾರಣೆಗೆ ಶ್ರಮಿಸಿದರು. ಪ್ರತಿಯೊಬ್ಬರೂ ಇವರ ಆದರ್ಶ ತತ್ವಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದರು.

ನಗರಸಭೆ ಅಧ್ಯಕ್ಷ ಎ.ಗಜೇಂದ್ರ ಮಾತನಾಡಿ, ಸಮಾಜದ ಎಲ್ಲ ವರ್ಗದವರು ವಚಕನಾರರ ವಚನಗಳ ಸಾರ ಹಾಗೂ ಆದರ್ಶ ಜೀವನದ ಬಗ್ಗೆ ತಿಳಿದುಕೊಳ್ಳಬೇಕು. ಇವು ಉತ್ತಮ ಜೀವನ ನಿರ್ವಹಣೆಗೆ ಪ್ರೇರಣೆಯನ್ನು ನೀಡುತ್ತವೆ. ಸಮಾಜಕ್ಕೂ ಒಳಿತಾಗುತ್ತದೆ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ನಗರ ಸಭೆ ಉಪಾಧ್ಯಕ್ಷ ಜೆ.ನಾಗರಾಜು, ಉಪ ವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್, ಜಿ.ಪಂ.ಉಪ ಕಾರ್ಯದರ್ಶಿ ಅತಿಕ್ ಪಾಷಾ, ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕರ ಡಿ.ಎಂ.ರವಿಕುಮಾರ್, ತಹಸೀಲ್ದಾರ್ ಅನಿಲ್, ಮುಖಂಡರಾದ ನಾರಾಯಣಸ್ವಾಮಿ, ಕೆ.ವಿ ವಿಜಯ್ ಕುಮಾರ್, ಶ್ರೀನಿವಾಸ, ವೆಂಕಟೇಶ್ ವೈ.ಶಂಕರ್, ಗುರ್ರಪ್ಪ ಮತ್ತಿತರರು ಇದ್ದರು.

*ನಗರದಲ್ಲಿ ಮೆರವಣಿಗೆ

ಕಾರ್ಯಕ್ರಮಕ್ಕೂ ಮೊದಲು ಶಿವಯೋಗಿ ಸಿದ್ದರಾಮೇಶ್ವರ ಬೃಹತ್ ಭಾವಚಿತ್ರದ ಮೆರವಣಿಗೆಯನ್ನು ನಡೆಸಲಾಯಿತು. ಮುತ್ತಿನ ಪಲ್ಲಕ್ಕಿಗಳು ಹಾಗೂ ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಜಾನಪದ ಕಲಾ ತಂಡಗಳೊAದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅಂಬೇಡ್ಕರ್ ಭವನದಿಂದ ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಸಾಗಿದರು.