ಜಿಲ್ಲೆ

ತಾಯಿಯ ರಕ್ಷಿಸಿದ ವೈಭವಿಗೆ ಜಿಲ್ಲಾಧಿಕಾರಿ ಸನ್ಮಾನ

Mangaluru - Hariprasad Rai


ಮಂಗಳೂರು : ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಜಿಲ್ಲಾಧಿಕಾರಿ ಶ್ಲಾಘಿಸಿದರು. ವೈಭವಿಯ ಈ ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಾಗಿದೆ ಎಂದು ಅವರು ಹೇಳಿದರು
ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು. ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದಾರೆ.