ಜಿಲ್ಲೆ

ನಗರದ ವಿವಿಧೆದೆ ವೈಕುಂಠ ಏಕಾದಶಿ ಪೂಜೆ

ಮೈಸೂರು: ವೈಕುಂಠ ಏಕಾದಶಿ ಪ್ರಯುಕ್ತ ನಗರದ ವಿವಿಧ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯ ನೆರವೇರಿದವು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.


ವಿಷ್ಣು ತನ್ನ ಅವತಾರ ಸಮಾಪ್ತಿಗೊಳಿಸಿ ವೈಕುಂಠಕ್ಕೆ ಹೋಗುವ ದಿನವನ್ನು ವೈಕುಂಠ ಏಕಾದಶಿಯಾಗಿ ಆಚರಿಸಲಾಗುತ್ತದೆ. ವೈಕುಂಠ ಏಕಾದಶಿಯಂದು ನಾರಾಯಣನ ದರ್ಶನ ಪಡೆದು, ವೈಕುಂಠ ದ್ವಾರದ ಮೂಲಕ ಹೊರಬಂದರೆ ಸ್ವರ್ಗ ಪ್ರಾಪ್ತಿಯಾಗಲಿದೆ ಎಂಬ ನಂಬಿಕೆ ಆಸ್ತಿಕರದು.


ಅಂತಯೆ, ನಗರದ ಒಂಟಿಕೊಪ್ಪಲಿನ ಲಕ್ಷ್ಮೀವೆಂಕಟರಮಣಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಹೂಗಳಿಂದ ಸ್ವರ್ಗದ ಬಾಗಿಲು ನಿರ್ಮಿಸಲಾಗಿತ್ತು. ದೇವಸ್ಥಾನಕ್ಕೆ ಭೇಟಿ ನೀಡಿದ ಭಕ್ತರು ಸ್ವರ್ಗದ ಬಾಗಿಲ ಮೂಲಕ ದೇವರ ದರ್ಶನ ಪಡೆದರು.