ವಿಜಯಪುರ: ಭಾರತದ ಬಗೆಗಿನ ಪ್ರಪಂಚದ ನೋಟವನ್ನೇ ಬದಲಾಯಿಸುವಂತೆ ಮಾಡಿದ ಧೀಮಂತ ಶಕ್ತಿ ಅಟಲ್ ಬಿಹಾರಿ ವಾಜಪೇಯಿ ಎಂದು ಬೆಂ.ಗ್ರಾ. ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಪರಿವೀಕ್ಷಣಾ ಮಂದಿರದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾದಿಂದ ಭಾನುವಾರ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 2ನೇ ಪುಣ್ಯತಿಥಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಮಾಜಿ ಶಾಸಕ ಜಿ.ಚಂದ್ರಣ್ಣ ಮಾತನಾಡಿ, ವಾಜಪೇಯಿ ಅವರನ್ನು ಎಲ್ಲ ಜನಾಂಗ, ಎಲ್ಲ ಪಕ್ಷಗಳು ಎಲ್ಲರ ಪ್ರೀತಿ ಪಾತ್ರರಾಗಿದ್ದ ಕಾರಣ ಅವರನ್ನು ಅಜಾತ ಶತ್ರುವೆಂದು ಕರೆಯಲಾಗುತ್ತಿತ್ತು ಎಂದು ಹೇಳಿದರು.
ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಬೂದಿಗೆರೆ ನಾರಾಯಣಸ್ವಾಮಿ, ತಾಲೂಕು ಯುವಮೋರ್ಚಾ ಅಧ್ಯಕ್ಷ ಮೋಹನ್ ಮಾತನಾಡಿದರು. ರಾಜ್ಯ ರೈತ ಮೋರ್ಚಾ ಮಾಜಿ ಉಪಾಧ್ಯಕ್ಷ ಎಂ.ನಾರಾಯಣಗೌಡ, ತಾಲೂಕು ಬಿಜೆಪಿ ಅಧ್ಯಕ್ಷ ಸುಂದರೇಶ್, ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ, ಕಾರ್ಯದರ್ಶಿ ಡಿ.ಎಸ್.ರವಿಕುಮಾರ್, ಎಸ್.ಟಿ.ಮೋರ್ಚಾ ಅಧ್ಯಕ್ಷ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ದೇ.ಸು.ನಾಗರಾಜ್, ಟೌನ್ ಬಿಜೆಪಿ ಅಧ್ಯಕ್ಷ ಚ.ವಿಜಯಬಾಬು ಮತ್ತಿತರರಿದ್ದರು.
ಯುವಮೋರ್ಚಾದ ಮೋಹನ್ ಹಾಗೂ ಸೃಜನ್ ಅವರ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಯುವಕರು ಬಿಜೆಪಿಗೆ ಸೇರ್ಪಡೆಗೊಂಡರು.