ಮೈಸೂರು: ನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಭಾನುವಾರ ವಾಲ್ಮೀಕಿ ಜಯಂತಿ ಆಚರಿಸಲಾಯಿತು.
ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಕಚೇರಿಯ ಹೊರಗೆ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಮೇಯರ್ ಶಿವಕುಮಾರ್, ಉಪಮೇಯರ್, ಡಾ.ರೂಪಾ ಯೋಗೇಶ್, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ರಾಜ್ಯ ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಇದ್ದರು.