ಬಂಟ್ವಾಳ: ವ್ಯಕ್ತಿಯೊಬ್ಬನ ಮನಃ ಪರಿವರ್ತನೆಯಾದರೆ ಆತ ಉನ್ನತ ಸ್ಥಾನಕ್ಕೇರಬಹುದು ಎನ್ನುವುದಕ್ಕೆ ಮಹರ್ಷಿ ವಾಲ್ಮೀಕಿಯ ಜೀವನ ಉತ್ತಮ ನಿದರ್ಶನ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯಿತಿಯ ಎಸ್.ಜೆ.ಎಸ್.ವೈ. ಸಭಾಂಗಣದಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೇವಸ್ಯಮುಡೂರು ಶಾಲೆ ಶಿಕ್ಷಕಿ ಹರಿಣಾಕ್ಷಿ ಉಪನ್ಯಾಸ ನೀಡಿದರು. ಬಂಟ್ವಾಳ ತಹಸೀಲ್ದಾರ್ ಮಂಜುನಾಥ್, ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ವಿನಯಕುಮಾರಿ ಕೆ.ಬಿ., ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಶೇಷಗಿರಿ ನಾಯಕ್ ಶುಭ ಹಾರೈಸಿದರು. ದ.ಕ. ಜಿಲ್ಲಾ ಮರಾಟಿ ಸಂರಕ್ಷಣಾ ಸಮಿತಿ ಅಧ್ಯಕ್ಷ ಅಶೋಕ್ ನಾಯ್ ಕೆದಿಲ, ಮುಖಂಡರಾದ ಪಿ.ಬಿ.ಮಹಾಲಿಂಗ ನಾಯ್ಕ ಪುಣಚ ವಿಶೇಷ ಆಹ್ವಾನಿತರಾಗಿದ್ದರು.
ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ನಡೆಯಿತು. ನಿಲಯ ಪಾಲಕ ಪ್ರಸಾದ್ ಕಾರ್ಯಕ್ರಮ ನಿರ್ವಹಿಸಿದರು. ನಿಲಯ ಪಾಲಕಿ ಭವ್ಯಾ ವಂದಿಸಿದರು.