ಕಾರ್ಕಳ: ತಂದೆ ಮಾತಿನ ಪಾಲನೆಗಾಗಿ ದೃಢ ನಿರ್ಧಾರ ಕೈಗೊಂಡ ರಾಮ ವನವಾಸಕ್ಕೆ ಸಿದ್ಧನಾಗುತ್ತಾನೆ. ಪತ್ನಿ ಸೀತೆ ಹಾಗೂ ಸಹೋದರ ಲಕ್ಷ್ಮಣ ರಾಮನಿಗೆ ಜತೆಗಾರರಾಗುತ್ತಾರೆ ಎಂದು ವಿದ್ವಾಂಸ ಡಾ. ರಾಘವೇಂದ್ರ ರಾವ್ ಪಡುಬಿದ್ರಿ ಹೇಳಿದರು.
ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕಾರ್ಕಳ ತಾಲೂಕು ಘಟಕ ಸಹಯೋಗದಲ್ಲಿ ಆಯೋಜನೆಗೊಂಡ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಪ್ರಮುಖರಾದ ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ರಮೇಶ್ ಕಾರ್ಣಿಕ್, ಮಿತ್ರಪ್ರಭಾ ಹೆಗ್ಡೆ ಉಪಸ್ಥಿತರಿದ್ದರು. ಅನಂತಕೃಷ್ಣ ಭಟ್ ಪ್ರಾರ್ಥಿಸಿದರು. ಸದಾನಂದ ನಾರಾವಿ ಸ್ವಾಗತಿಸಿದರು. ಮಾಲತಿ ವಸಂತರಾಜ್ ವಂದಿಸಿದರು. ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.