ವಿಜಯಪುರ: ಕಳ್ಳರ ಹಾವಳಿಗೆ ಬಲಿಯಾದ ಸಂತೋಷ ಕನ್ನಾಳ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಹಾಗೂ ಕುಟುಂಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಅಖಿಲ ಭಾರತೀಯ ವಾಲ್ಮೀಕಿ ಸೇವಾ ಸಂಘ ಆಗ್ರಹಿಸಿದೆ.
ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಂಘದ ಪದಾಧಿಕಾರಿಗಳು ಸಂತೋಷನ ಸಾವಿಗೆ ವ್ಯವಸ್ಥೆಯ ವೈಫಲ್ಯವೇ ಕಾರಣ. ಸಾರ್ವಜನಿಕರ ಬದುಕಿಗೆ ಭದ್ರತೆ ಒದಗಿಸುವಲ್ಲಿ ಆಡಳಿತ ವರ್ಗ ವಿಫಲವಾಗಿದೆ. ಹೀಗಾಗಿ ಸರ್ಕಾರವೇ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಕಳ್ಳರಿಂದ ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿರುವ ಸರ್ಕಾರ ಕೂಡಲೇ ಸಂತೋಷನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಬಸವಕುಮಾರ ಕಾಂಬಳೆ, ದೇವೇಂದ್ರ ಜಗದೇವ ಹಡಲಗಿ, ಹಣಮಂತ ಬಳಗಾನೂರ, ಹಣಮಂತ ದೊಡಮನಿ, ಅಭಿಷೇಕ ಚಕ್ರವರ್ತಿ ಮತ್ತಿತರರಿದ್ದರು.