ಲಿಂಗಸುಗೂರು: ತಾಲೂಕಿನ ಗೋನವಾಟ್ಲ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಈಶ್ವರಪ್ಪ ಮಲ್ಲಾಡರ್ ಅವರು ಮಹರ್ಷಿ ವಾಲ್ಮೀಕಿ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:
ನ.11 ರಂದು ಬೆಂಗಳೂರಿನ ಬಾಪು ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಗುರುಪೀಠ ಮತ್ತು ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟ ಸಹಯೋಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ವಾಲ್ಮೀಕಿ ಗುರುಪೀಠದ ಬ್ರಹ್ಮಾನಂದ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಕರ್ನಾಟಕ ವಾಲ್ಮೀಕಿ ನೌಕರರ ಒಕ್ಕೂಟದ ಅಧ್ಯಕ್ಷ ಪಿ.ಮೋಹನ ಕಿಶೋರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4ಎಲ್‌ಎನ್‌ಜಿ02
ಈಶ್ವರಪ್ಪ ಮಲ್ಲಾಡರ್