ಜಿಲ್ಲೆ

Value addition ಮಾಡಿ ಕೃಷಿ ಉತ್ಪನ್ನಗಳ ಬೆಲೆಯನ್ನು 2 ಪಟ್ಟು ಹೆಚ್ಚಿಸಿ

ಕಾರವಾರ: ಜಿಲ್ಲೆಯ ರೈತರು ಬೆಳೆಯುವ ಉತ್ಪನ್ನಗಳಿಗೆ ಮೌಲ್ಯವರ್ಧನೆ (Value addition) ಮಾಡಿ, ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಒತ್ತು ನೀಡುವ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳಿಗೆ ಗರಿಷ್ಠ ಲಾಭ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆಳೆಗಳಿಗೆ ಲಾಭ ದೊರಕಿಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಇವುಗಳ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಅರಿವು ಮೂಡಿಸಬೇಕು, ಅವರು ತಮ್ಮ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡುವ ವಿಧಾನಗಳ ಬಗ್ಗೆ ತರಬೇತಿ ಆಯೋಜಿಸಿ, ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕ್‌ಗಳಿಂದ ದೊರೆಯುವ ಸಾಲ ಮತ್ತು ಸಬ್ಸಿಡಿಗಳ ಕುರಿತು ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲೆಯ ಹಲವು ರೈತರು ಒಟ್ಟುಗೂಡಿ ಬೃಹತ್ ಪ್ರಮಾಣದಲ್ಲಿ ಆಹಾರ ಸಂಸ್ಕರಣಾ ಉದ್ದಿಮ ಸ್ಥಾಪನೆ ಮಾಡಲು ಪ್ರೋತ್ಸಾಹ ನೀಡಬೇಕು, ರೈತ ಉತ್ಪಾದಕ ಸಂಸ್ಥೆಗಳು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಎಂದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಬಂದರು ವ್ಯವಸ್ಥೆ ಇಲ್ಲಿಂದ ಜಿಲ್ಲೆಯ ರೈತರ ಮೌಲ್ಯ ವರ್ಧಿತ ಉತ್ಪನ್ನಗಳನ್ನು ರಫ್ತು ಮಾಡುವ ಕುರಿತಂತೆ ಅಧಿಕಾರಿಗಳು ಗಮನಹರಿಸಬೇಕು ಎಂದರು.

ವೈಜ್ಞಾನಿಕ Value addition

ಜಿಲ್ಲೆಯಲ್ಲಿ ಬೆಳೆಯುವ ರೈತರ ಉತ್ಪನ್ನಗಳನ್ನು ವೈಜ್ಞಾನಿಕ ರೀತಿಯಲ್ಲಿ ಮೌಲ್ಯ ವರ್ಧನೆ (Value addition) ಮಾಡುವ ಕುರಿತಂತೆ ಕೇಂದ್ರಿಯ  ಆಹಾರ ತಾಂತ್ರಿಕ ಸಂಶೋಧನಾಲಯದ ವಿಜ್ಞಾನಿಗಳ ನೆರವು ಪಡೆಯುವಂತೆ ಮುತ್ತು ಈ ಉತ್ಪನ್ನಗಳಿಗೆ ಬ್ರಾಂಡಿಂಗ್ ಮಾಡಲು ಮತ್ತು ಆನ್‌ಲೈನ್‌ನಲ್ಲಿ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಒದಗಿಸುವ ಕುರಿತು ಕಾರ್ಯೋನ್ಮೂಖರಾಗುವಂತೆ ಸೂಚಿಸಿದರು.

ರೈತರು ಆಹಾರ ಸಂಸ್ಕರಣಾ ಉದ್ದಿಮೆ ಸ್ಥಾಪನೆಗೆ ಬ್ಯಾಂಕ್‌ಗಳಿAದ ಎಲ್ಲಾ ರೀತಿಯ ನೆರವು ನೀಡಬೇಕು, ಸಣ್ಣಪುಟ್ಟ ಕಾರಣಗಳಿಗೆ ರೈತರ ಸಾಲದ ಅರ್ಜಿಗಳನ್ನು ವಜಾಗೊಳಿಸಿದೆ, ದಾಖಲೆಗಳ ಕೊರತೆಯಿದ್ದಲ್ಲಿ ರೈತರಿಗೆ ಮಾಹಿತಿ ನೀಡಿ ಅವರಿಂದ ಸೂಕ್ತ ದಾಖಲೆಗಳನ್ನು ಪಡೆದು ಸಾಲ ಮಂಜೂರು ಮಾಡುವಂತೆ ಮತ್ತು ಆದ್ಯತೆಯಲ್ಲಿ ಸಾಲ ವಿತರಿಸುವ ಕುರಿತು ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವಕರ್, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಸತೀಶ್, ಲೀಡ್ ಬ್ಯಾಂಕ್ ಮ್ಯಾನೇಜರ್ ಭಾರತಿ ವಸಂತ್ ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.