ವಿಜಯವಾಣಿ ಸುದ್ದಿಜಾಲ ಬೈಂದೂರು
ಇಂದಿನ ಕಾಲಘಟ್ಟದ ಶಿಕ್ಷಣ ವ್ಯವಸ್ಥೆಯಲ್ಲಿ ಕೇವಲ ಅಂಕಗಳಿಕೆಯೇ ಮಾನದಂಡವಾಗಿರದೇ ಮೌಲ್ಯಾಧಾರಿತ ಮತ್ತು ಜೀವನಾಧಾರಿತ ಶಿಕ್ಷಣ ಅತೀ ಅಗತ್ಯವಾಗಿದೆ. ವಿದ್ಯಾರ್ಥಿಗಳಿಗೆ ಬರವಣಿಗೆ ಜತೆಗೆ ಪ್ರತಿಭೆ ಕೂಡ ಮುಖ್ಯವಾಗಿದೆ. ಸಂಕುಚಿತ ಸ್ವಭಾವ ಬದಿಗಿರಿಸಿ ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಬುದ್ಧಿವಂತರ ಲಕ್ಷಣ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.
ಇಲ್ಲಿನ ರಾಜರಾಜೇಶ್ವರಿ ಸಭಾಭವನದಲ್ಲಿ ಶುಕ್ರವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪದಿವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಪಿ. ನಾಯ್ಕ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ ಪೂಜಾರಿ, ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್, ಲಾವಣ್ಯ ಅಧ್ಯಕ್ಷ ನರಸಿಂಹ ಬಿ.ನಾಯಕ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಐ.ನಾರಾಯಣ, ಸದಾಶಿವ ಪಡುವರಿ, ಗಿರೀಶ್ ಬೈಂದೂರು, ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಶಿವಕುಮಾರ್ ಪಿ.ವಿ., ಪ್ರತಿನಿಧಿ ಮಂಜುನಾಥ ಡಿ., ಐಕ್ಯೂಎಸಿ ಸಂಚಾಲಕಿ ಚಿತ್ರಾ ಪಡಿಯಾರ್, ದೈಹಿಕ ಶಿಕ್ಷಣ ಉಪನ್ಯಾಸಕ ಪ್ರಭಾಕರ ಗೌಡ, ಕ್ರೀಡಾ ಪ್ರತಿನಿಧಿ ಸೌಜನ್ಯಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಅಕ್ಷತಾ ಎಲ್. ಸ್ವಾಗತಿಸಿದರು. ಸುಹರ್ಷಿಣಿ ಎಚ್. ನಿರೂಪಿಸಿದರು. ಅಶ್ವಿನಿ ವಂದಿಸಿದರು. ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು.