ಮಂಗಳೂರು: ವಾಮಂಜೂರು ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಟೆಕ್ನೋ ಕಲ್ಚರಲ್ ಫೆಸ್ಟ್ ಟಿಯಾರಾ 2024 ಪ್ರಶಸ್ತಿ ಪ್ರದಾನದೊಂದಿಗೆ ಯಶಸ್ವಿಯಾಗಿ ಜರುಗಿತು.
ಎಸ್‌ಜೆಇಸಿ ನಿರ್ದೇಶಕ ವಂ.ಫಾ.ವಿಲ್ಪ್ರೆಡ್ ಪ್ರಕಾಶ್ ಡಿಸೋಜ, ಸಹಾಯಕ ನಿರ್ದೇಶಕ ವಂ.ಫಾ.ಕೆನೆತ್ ಆರ್. ಕ್ರಾಸ್ತಾ, ಎಸ್‌ಜೆಇಸಿ ಪ್ರಾಂಶುಪಾಲ ಡಾ.ರಿಯೊ ಡಿಸೋಜ, ಉಪಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಹಾಗೂ ಕಾಲೇಜಿನ ಮಾನವ ಸಂಪನ್ಮೂಲ ವ್ಯವಸ್ಥಾಪಕರಾದ ರಾಕೇಶ್ ಲೋಬೊ ಉಪಸ್ಥಿತರಿದ್ದರು.
ಸಮಾರೋಪ ಕಾರ್ಯಕ್ರಮದಲ್ಲಿ ಫೆಸ್ಟ್‌ನ ಸಿಬ್ಬಂದಿ ಸಂಚಾಲಕ ರೂಪೇಶ್ ಮತ್ತು ಚೈತ್ರಾ ಯು ಆರ್, ಕಾರ್ಯಕ್ರಮದ ವಿದ್ಯಾರ್ಥಿ ಸಂಚಾಲಕ ವಿನೋಲ್ ಎ ಡಿಸೋಜಾ ಮತ್ತು ಆಳ್ವಾ ಶ್ವೇತಾ ಶಿವಪ್ರಸಾದ್ ಉಪಸ್ಥಿತರಿದ್ದರು.
ಮೂರು ದಿನಗಳ ಕಾರ್ಯಕ್ರಮವು ತಮ್ಮ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸುವ ತಾಂತ್ರಿಕ, ತಾಂತ್ರಿಕೇತರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಸಾಕ್ಷಿಯಾಯಿತು.
ಮೂರು ದಿನಗಳ ಕಾಲ ನಡೆದ ಎಲ್ಲಾ ಕಾರ್ಯಕ್ರಮಗಳ ಬಹುಮಾನ ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು. ಇಂಜಿನಿಯರಿಂಗ್ ವಿಭಾಗದಲ್ಲಿ ಮಂಗಳೂರಿನ ಅಜಿಇಟಿ ಸಮಗ್ರ ಚಾಂಪಿಯನ್‌ಶಿಪ್ ಪಡೆದರೆ, ಎನ್‌ಎಂಎಎಂಐಟಿ, ನಿಟ್ಟೆ ಸಮಗ್ರ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯಿತು.
ನಾನ್ ಇಂಜಿನಿಯರಿಂಗ್ ವಿಭಾಗದಲ್ಲಿ ಮಂಗಳೂರಿನ ಎಸ್‌ಡಿಎಂ ಕಾಲೇಜ್ ಆಫ್ ಬ್ಯುಸಿನೆಸ್ ಮ್ಯಾನೇಜ್‌ಮೆಂಟ್ ಸಮಗ್ರ ಚಾಂಪಿ ಸ್ವೀಡೆಲ್ ಮತ್ತು ಅವೀನ್ ಕಾರ್ಯಕ್ರಮ ನಿರೂಪಿಸಿದರು.