ಜೆಸಿಐ ಬೆಳ್ಮಣ್ ಹಾಗೂ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವಠಾರದಲ್ಲಿ ವನಮಹೋತ್ಸವ ಆಚರಿಸಲಾಯಿತು 
ಜಿಲ್ಲೆ

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವಠಾರದಲ್ಲಿ ವನಮಹೋತ್ಸವ

ಬೆಳ್ಮಣ್: ಜೆಸಿಐ ಬೆಳ್ಮಣ್ ಹಾಗೂ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವಠಾರದಲ್ಲಿ ವನಮಹೋತ್ಸವ ಆಚರಿಸಲಾಯಿತು. ಜೆಸಿಐ ಬೆಳ್ಮಣ್ ಅಧ್ಯಕ್ಷೆ ಸರಿತಾ ದಿನೇಶ್ ಸುವರ್ಣ ಚಾಲನೆ ನೀಡಿದರು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಸಂಚಾಲಕ ಸಂದೀಪ್ ವಿ.ಪೂಜಾರಿ ಅಬ್ಬನಡ್ಕ, ಬೆಳ್ಮಣ್ ಜೆಸಿಐ ನಿಕಟ ಪೂರ್ವಾಧ್ಯಕ್ಷ ಸತೀಶ್ ಪೂಜಾರಿ ಅಬ್ಬನಡ್ಕ, ಪೂರ್ವಾಧ್ಯಕ್ಷ ದಿನೇಶ್ ಸುವರ್ಣ ಹಾಗೂ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಪೂರ್ವಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.