ಜಿಲ್ಲೆ

ಕೂಡಿಗೆಯಲ್ಲಿ ವನಮಹೋತ್ಸವ

ಸುನಿಲ್ ಪೊನ್ನೇಟಿ

ಕುಶಾಲನಗರ:

ಕೂಡಿಗೆ ಕೃಷಿ ಕ್ಷೇತ್ರದ ಆವರಣದಲ್ಲಿರುವ ಕೂಡಿಗೆ ಸರ್ಕಾರಿ ಕ್ರೀಡಾ ಪ್ರೌಢಶಾಲಾ ಆವರಣದಲ್ಲಿ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಗಿಡನೆಟ್ಟು ಚಾಲನೆ ನೀಡಿದರು. ನಂತರ ಮಾತನಾಡಿ, ವಿದ್ಯಾರ್ಥಿಗಳು ಶಾಲೆಯ ಆವರಣ, ಸುತ್ತಮುತ್ತಲಿನ ಜಾಗಗಳಲ್ಲಿ ಅರಣ್ಯ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಮೂಲಕ ಉತ್ತಮ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ, ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ ನಾಯಕ್, ಡಿ. ಸಿ. ಎಫ್. ಭಾಸ್ಕರ್, ಎ. ಸಿ. ಎಫ್. ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ರತನ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿಸ್ಮಯಿ, ಕ್ರೀಡಾ ಶಾಲೆಯ ಮುಖ್ಯೋಪಾಧ್ಯಾಯ ದೇವ್‌ಕುಮಾರ್, ಡಿಆರ್‌ಎಫ್‌ಒ ಅನಿಲ್ ಡಿಸೋಜ, ಶಾಲಾ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಇದ್ದರು.