ಜಿಲ್ಲೆ

ಮುಂದಿನ ತಲೆಮಾರಿಗೆ ಉತ್ತಮ ಪರಿಸರ ಉಳಿಸುವುದು ನಮ್ಮ ಜವಾಬ್ದಾರಿ : ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Mysuru

ಮೈಸೂರು: ನಮ್ಮ ಹಿಂದಿನ ತಲೆಮಾರಿನವರು ನಮಗೆ ಉತ್ತಮವಾದ ಪರಿಸರವನ್ನು ಬಿಟ್ಟುಹೋಗಿದ್ದು, ನಾವು ಅದೇ ರೀತಿ ಮುಂದಿನ ತಲೆಮಾರಿಗೆ ಉತ್ತಮ ಪರಿಸರವನ್ನು ನೀಡುವ ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂದು ಮೈಸೂರು ರಾಜಮನೆತನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್, ವಾಣಿವಿಲಾಸ ಅರಸು ಶಿಕ್ಷಣ ಸಂಸ್ಥೆ ವತಿಯಿಂದ ನಗರದ ಅರಸು ಬೋರ್ಡಿಂಗ್ ಕಾಲೇಜು ಆವರಣದಲ್ಲಿ ಗುರುವಾರ ಹಮ್ಮಿಕೊಂಡ ಶ್ರೀ ವಾಣಿ ಫೆಸ್ಟ್-2022 ಉದ್ಘಾಟಸಿ ಮಾತನಾಡಿದ ಅವರು, ನಗರದಲ್ಲಿ ಉತ್ತಮ ಪರಿಸರ ನಿರ್ಮಾಣಕೋಸ್ಕರ ನಾವೆಲ್ಲರೂ ಪ್ಲಾಸ್ಟಿಕ್‌ಅನ್ನು ಬಳಕೆ ಮಾಡಬಾರದು. ಪ್ಲಾಸ್ಟಿಕ್ ಮುಕ್ತ ಮೈಸೂರು ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣ ತೊಡಬೇಕು ಎಂದು ಕರೆ ನೀಡಿದರು.

ಸಮಾಜಮುಖಿ ಕಾರ್ಯಗಳು ನಮ್ಮಿಂದಲೇ ಮೊದಲು ಪ್ರಾರಂಭವಾಗಬೇಕು. ಹಾಗಾಗಿ ಅರಸು ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಮುಂದಿನ ವರ್ಷ ನಡೆಸುವ ಶ್ರೀ ವಾಣಿ ಫೆಸ್ಟ್ ಪ್ಲಾಸ್ಟಿಕ್ ಮುಕ್ತವಾಗಿ ಇರಬೇಕು ಎಂದು ಸಲಹೆ ನೀಡಿದರು. ವೇದಿಕೆಯಲ್ಲಿ ನಟ ಧನ್ವೀರ್ ಗೌಡ, ಮೈಸೂರು ರಾಜಮನೆತನದ ತ್ರಿಷಿಕಾ ಒಡೆಯರ್, ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ಗೌರವ ಕಾರ್ಯದರ್ಶಿ ಮಹೇಶ್ ಎನ್. ಅರಸ್ ಹಾಗೂ ಇತರರು ಇದ್ದರು.