ಜಿಲ್ಲೆ

ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಆನಂದಕುಮಾರ ಅಂಗಡಿ

ಹುಬ್ಬಳ್ಳಿ : ಅಣ್ಣಿಗೇರಿಯ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಒಂದನೇಯ ತ್ರೖೆಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಜೂ. 13 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ನಲವಡಿ, ಭದ್ರಾಪುರ, ಕೋಳಿವಾಡ, ಅಣ್ಣಿಗೇರಿ, ಹಳ್ಳಿಕೇರಿ, ಮಜ್ಜಿಗುಡ್ಡ, ಕೊಂಡಿಕೊಪ್ಪ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಜೂ.14ರಂದು ರಾಮನಕೊಪ್ಪದ 110 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಒಂದನೇಯ ತ್ರೖೆಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಅಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಕೈಗಾರಿಕಾ ಪ್ರದೇಶ, ಛಬ್ಬಿ, ಪಾಲಿಕೊಪ್ಪ, ಅರಳಿಕಟ್ಟಿ, ದ್ಯಾಮಾಪುರ, ವರೂರ, ಮುತ್ತಳ್ಳಿ, ತಡಸ, ರಾಮನಕೊಪ್ಪ, ಇನಾಂವೀರಾಪುರ, ಮಳಲಿ ಸೇರಿದಂತೆ ಸುತ್ತ್ತನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.