ಮಡಿಕೇರಿ:
ಮಡಿಕೇರಿ ನಗರ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಅ. 8 ರಂದು ಮಂಗಳವಾರ 7 ನೇ ವರ್ಷದ ಮಹಿಳಾ ದಸರಾ ಆಯೋಜಿಸಲಾಗಿದ್ದು ವೈವಿಧ್ಯಮಯ ಸ್ಪರ್ಧೆಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ. ಮತ್ತು ಮಹಿಳಾ ದಸರಾ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 8 ರಂದು ಮಹಿಳಾ ದಸರಾ ಅಂಗವಾಗಿ ಜಿಲ್ಲೆಯ ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆಗಳು, ಕಾರ್ಯಕ್ರಮಗಳು ನಗರದ ಗಾಂಧಿ ಮೈದಾನದ ಕಲಾಸಂಭ್ರಮ ಸಭಾಂಗಣದಲ್ಲಿ ಮಡಿಕೇರಿ ನಗರಸಭೆಯ ಸದಸ್ಯೆಯರು, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಮೆಹಂದಿ ಹಾಕುವುದು, ಭಾರತೀಯ ಸಾಂಪ್ರದಾಯಿಕ ಉಡುಗೆ ಸ್ಪರ್ಧೆ, ಒಂಟಿಕಾಲಿನ ಓಟ, ಕಪ್ಪೆ ಜಿಗಿತ, ಕೇಶವಿನ್ಯಾಸ, ಗಾರ್ಭ ನೃತ್ಯ, ಸೀರೆಗೆ ನಿಖರ ಬೆಲೆ ಹೇಳುವುದು, 60 ವರ್ಷ ಮೇಲ್ಪಟ್ಟವರಿಗೆ ಅಜ್ಜಿ ಜತೆ ಮೊಮ್ಮಕ್ಕಳ ನಡಿಗೆ, ವಾಲಗತ್ತಾಟ್, ಕಣ್ಣಿಗೆ ಬಟ್ಟೆ ಕಟ್ಟಿ ಮೇಕಪ್ ಮಾಡುವುದು, ಬಲೂನ್ ಗ್ಲಾಸ್ ಸ್ಪರ್ಧೆ, ಬಾಂಬ್ ಇನ್ ದಿ ಸಿಟಿ, ಸೇರಿದಂತೆ ಹಲವು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ, ಮೇಕಪ್ ಮಾಡುವ ಸ್ಪರ್ಧೆ, ಕೇಶವಿನ್ಯಾಸ, ಮೆಹಂದಿ ಸ್ಪರ್ಧೆಗಳಿಗೆ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು. ಅ. 8 ರಂದು ಮಹಿಳಾ ದಸರಾ ದಿನದಂದೇ ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬಹುದಾಗಿದೆ,
ಈ ಸಂಬAಧಿತ ನಡೆದ ಪೂರ್ವಭಾವಿ ತಯಾರಿ ಸಭೆಯಲ್ಲಿ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ., ಮಡಿಕೇರಿ ನಗರ ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ಖಜಾಂಚಿ ಅರುಣ್ ಶೆಟ್ಟಿ, ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ಪಿ ಸವಿತಾ, ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾಪೂವಯ್ಯ, ಮಾಜಿ ಉಪಾಧ್ಯಕ್ಷೆಯರಾದ ಸವಿತಾ ರಾಕೇಶ್, ಲೀಲಾ ಶೇಷಮ್ಮ, ಸದಸ್ಯೆ ಸಬಿತಾ, ಮೂಡ ಸದಸ್ಯೆ ಮೀನಾಜ್ ಪ್ರವೀಣ್, ಸಾಂಸಕೃತಿಕ ಸಮಿತಿ ಸದಸ್ಯೆಯರಾದ ವೀಣಾಕ್ಷಿ, ಭಾರತಿ ರಮೇಶ್, ಮಹಿಳಾ ದಸರಾ ಸದಸ್ಯೆಯರಾದ ಕನ್ನಿಕೆ, ಪ್ರೇಮ, ಸ್ವರ್ಣಲತಾ, ಶೃತಿ ಇದ್ದರು. ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕುಡೆಕಲ್ ಸವಿತಾ ಸಂತೋಷ್ ಅವರನ್ನು 9535898352, 9483785810 ಈ ನಂಬರ್‌ನಲ್ಲಿ ಸಂಪರ್ಕಿಸಬಹುದು.