ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಮತ್ತು ಮೃತ ವೈದ್ಯೆ ಕುಟುಂಬಸ್ಥರಿಗೆ ಶೀಘ್ರದಲ್ಲಿ ನ್ಯಾಯ ಒದಗಿಸುವ ಕುರಿತು ಹಾಗೂ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸುರಕ್ಷತೆ ಒದಗಿಸಲು ಆಗ್ರಹಿಸುವ ಕುರಿತು ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ ಹೆಗ್ಡೆ ಮುಖಾಂತರ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು 
ಜಿಲ್ಲೆ

ವಿವಿಧ ಸಂಘಟನೆಗಳಿಂದ ಮನವಿ

ಇಂದಿರಾ ಎನ್ ಕೆ

ಕೊಕ್ಕರ್ಣೆ: ಕೋಲ್ಕತ್ತಾದ ಆರ್.ಜಿ.ಕರ್. ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ವಿವಿಧ ಸಂಘಟನೆಗಳಿಂದ ಬ್ರಹ್ಮಾವರ ತಹಸೀಲ್ದಾರ್ ಶ್ರೀಕಾಂತ ಹೆಗ್ಡೆ ಮುಖಾಂತರ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಲಯನ್ಸ್ ಕ್ಲಬ್ ಬ್ರಹ್ಮಾವರ, ಸಮೃದ್ಧಿ ಮಹಿಳಾ ಸಂಘ ಪೇತ್ರಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಇಂಡಿಯನ್ ಡೆಂಟಲ್ ಅಸೋಸಿಯೇಷನ್, ಕರ್ನಾಟಕ ಸರ್ಕಾರಿ ವೈದ್ಯರ ಸಂಘ, ಆಯುಷ್ ವೈದ್ಯರ ಸಂಘ, ಪಶು ವೈದ್ಯರ ಸಂಘ, ರೋಟರಿ ಬ್ರಹ್ಮಾವರ, ರೋಟರಿ ರಾಯಲ್ ಬ್ರಹ್ಮಾವರ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಸ್ಪೋರ್ಟ್ಸ್ ಕ್ಲಬ್ ಬ್ರಹ್ಮಾವರ, ಹಿರಿಯ ನಾಗರಿಕರ ಸಂಘ ಬ್ರಹ್ಮಾವರ ಇದ್ದರು.