ಸವಣೂರ: ಸ್ವಾತಂತ್ರ್ಯೊತ್ಸವ ಅಮೃತ ಮಹೋತ್ಸವದ ಅಂಗವಾಗಿ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನದೊಂದಿಗೆ ರಾಷ್ಟ್ರಕ್ಕಾಗಿ ತ್ಯಾಗ ಬಲಿದಾನ ನೀಡಿದ ವೀರರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಹಮ್ಮಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ದೊಡ್ಡಣ್ಣವರ ತಿಳಿಸಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ ನೀಡಿ, ಪಂಚಪ್ರಾಣ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ಮೇರೆಗೆ ಸ್ವಾತಂತ್ರ್ಯೊತ್ಸವ ಅಮೃತ ಮಹೋತ್ಸವವನ್ನು ಆ. 30ರ ವರೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ಸಂಭ್ರಮಿಸಲಾಗುತ್ತಿದೆ ಎಂದರು.
ಅಧಿಕಾರಿಗಳಾದ ಪ್ರಕಾಶ ಕಬಾಡ್ರ, ಸುರೇಶ ಪೂಜಾರ, ಗಾಯತ್ರಿ ಬಿಳಚಿ, ಬಿ.ವಿ.ಮಠದ, ಗುರುನಾಥ ಬೋಗಾರ, ಸತೀಶ ಪೂಜಾರ, ಸ್ಥಾಯಿ ಸಮಿತಿ ಅಧ್ಯಕ್ಷ ಫಜಲಅಹ್ಮದ ಪಠಾಣ, ಪ್ರಮುಖರಾದ ಲಕ್ಷ್ಮಣ ಕನವಳ್ಳಿ, ಶಿವಾನಂದ ಹುಲ್ಲಮ್ಮನವರ, ಪ್ರವೀಣ ಬಾಲೆಹೊಸೂರ, ಶ್ರೀನಿವಾಸ ಗಿತ್ತೆ, ಖಲಂದರ ಮುಂಡರಗಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.