ಜಿಲ್ಲೆ

ಸ್ವರ್ಣವಲ್ಲಿಯಲ್ಲಿ ವಿವಿಧ ಧಾರ್ವಿುಕ ಕಾರ್ಯಕ್ರಮ

ಬಸವರಾಜ ವೀರಪ್ಪ ಗರಗ

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಶ್ರೀ ನೃಸಿಂಹ ಜಯಂತಿ ಹಿನ್ನೆಲೆಯಲ್ಲಿ ವಿವಿಧ ಧಾರ್ವಿುಕ ಕಾರ್ಯಕ್ರಮಗಳು ಭಾನುವಾರ ನಡೆದವು.

ಜಯಂತಿಯ ಅಂಗವಾಗಿ ನೃಸಿಂಹ ದೇವರಿಗೆ ಶತರುದ್ರ ಅಭಿಷೇಕ, ಕಲ್ಪೋಕ್ತ ಮಹಾಪೂಜೆ, ಫಲ ಪಂಚಾಮೃತ ಅಭಿಷೇಕ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಹಾಗೂ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ನಡೆಯಿತು.