ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳಿಗೆ ತರಬೇತಿ ಕಾರ್ಯಾಗಾರ ನಡೆಯಿತು. ಸಿಇಒ ನವಡೆ ವಿನಾಯಕ ಕಾರ್ಭಾರಿ, ಮಹೇಶ್ ಅಂಬೆಕಲ್ಲು, ವಿಶ್ವನಾಥ್ ಬಿ. ಮತ್ತಿತರರಿದ್ದರು.
- ಜಿಪಂ ಸಿಇಒ ವಿನಾಯಕ ಕಾರ್ಭಾರಿ ಸೂಚನೆ
ಮಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಲೈವ್ಲಿಹುಡ್ ಮಿಷನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಪಿಡಿಒಗಳು ಹಾಗೂ ಗ್ರಾಪಂ ಸಿಬ್ಬಂದಿ ತೊಡಗಿಸಿಕೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನವಡೆ ವಿನಾಯಕ ಕಾರ್ಭಾರಿ ಕರೆ ನೀಡಿದರು.
ಜಿಪಂ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಿಡಿಒಗಳಿಗೆ ವಿಬಿ-ಜಿ ರಾಮ್ ಜಿ ಸಿಬ್ಬಂದಿಯ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಂಗಳೂರು ತಾಪಂ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ಲು, ಬಂಟ್ವಾಳ ತಾಪಂ ಸಹಾಯಕ ನಿರ್ದೇಶಕ ವಿಶ್ವನಾಥ್ ಬಿ., ಸುಳ್ಯ ತಾಪಂ ಸಹಾಯಕ ನಿರ್ದೇಶಕ ರವಿಚಂದ್ರ, ಮೂಲ್ಕಿ ತಾಪಂ ಸಹಾಯಕ ನಿರ್ದೇಶಕ ಅರುಣ್ ಪ್ರದೀಪ್ ಡಿಸೋಜ ಯೋಜನೆಯ ಅನುಷ್ಠಾನದ ವಿವಿಧ ವಿಚಾರಗಳ ಕುರಿತು ನಾಲ್ಕು ಅಧಿವೇಶನಗಳಲ್ಲಿ ತರಬೇತಿ ನೀಡಿದರು. ಜಿಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ ರಾಯಕೋಡ ಪ್ರಸ್ತಾವಿಕವಾಗಿ ಮಾತನಾಡಿದರು.