ಜಿಲ್ಲೆ

ನಾಳೆ ಉಪನ್ಯಾಸಕರಿಗೆ ಕಾರ್ಯಾಗಾರ

Mangaluru - Nishantha Narayana


ಪುತ್ತೂರು: ಹದಿಹರೆಯದ ವಿದ್ಯಾರ್ಥಿಗಳ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಜೂ.೧೮ರಂದು ಬೆಳಗ್ಗೆ ೯ಕ್ಕೆ ಹದಿಹರೆಯದ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ನಿಭಾವಣೆ ಕುರಿತಂತೆ ’ವಿವೇಕ ನೈಪುಣ್ಯ’ ಎಂಬ ಶೀರ್ಷಿಕೆಯಡಿ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಗಾರ ಹಮ್ಮಿಕೊಳ್ಳಲಾಗಿದ್ದು, ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆಯಲಿದೆ.


ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ ಕಾರ್ಯದರ್ಶಿ ರೂಪಲೇಖ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಡಾ. ಎ.ವಿ ಬಾಳಿಗ ಆಸ್ಪತ್ರೆಯ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ವಿವಿಧ ಅವಽಗಳಲ್ಲಿ ಕಾರ್ಯಗಾರವನ್ನು ನಡೆಸಿ ಕೊಡಲಿದ್ದಾರೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ.ಅಧ್ಯಕ್ಷತೆ ವಹಿಸಲಿದ್ದಾರೆ.


ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಪ್ರಾಂಶುಪಾಲ ಮಹೇಶ್ ನಿಟಿಲಾಪುರ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶ್ಯಾನುಭೋಗ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್‌ರೈ, ವಿವೇಕಾನಂದ ಪದವಿಪೂರ್ವ ಕಾಲೇಜು ಹಾಗೂ ನರೇಂದ್ರ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಕಾರ್ಯಗಾರದಲ್ಲಿ ಪಾಲ್ಗೊಳ್ಳುವರು.