ರಾಯಚೂರು: ತಾಲೂಕಿನ ಮಟಮಾರಿ ಗ್ರಾಮದಲ್ಲಿನ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಗುರುವಾರ ಸಂಜೆ ಅದ್ಧೂರಿಯಾಗಿ ರಥೋತ್ಸವ ನೆರವೇರಿಸಲಾಯಿತು.
ಜಾತ್ರಾ ಮಹೋತ್ಸವ ನಿಮಿತ್ತ ವೀರಭದ್ರ ದೇವರಿಗೆ ಬೆಳಗ್ಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ ನೆರವೇರಿಸಲಾಯಿತು. ಸಂಜೆ ಬಿಚ್ಚಾಲಿಯ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ರಾಜ್ಯದ ವಿವಿಧ ಜಿಲ್ಲೆಯ ಹಾಗೂ ಪಕ್ಕದ ತೆಲಂಗಾಣ, ಆಂಧ್ರಪ್ರದೇಶದ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯ ಸ್ವಾಮೀಜಿ, ನೀಲಗಲ್‌ನ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಉಡಮಗಲ್‌ನ ವೀರಸಂಗಮೇಶ್ವರ ಸ್ವಾಮೀಜಿ, ಶಾಸಕರಾದ ಬಸನಗೌಡ ದದ್ದಲ್, ಡಾ.ಶಿವರಾಜ ಪಾಟೀಲ್ ಉಪಸ್ಥಿತರಿದ್ದರು.