ರಾಣೆಬೆನ್ನೂರ: ಯಾವುದೋ ವಾಹನ ಡಿಕ್ಕಿಯಾಗಿ ಪಾದಚಾರಿ ಮೃತಪಟ್ಟ ಘಟನೆ ತಾಲೂಕಿನ ಹಲಗೇರಿ ರಸ್ತೆಯಲ್ಲಿ ನಡೆದಿದೆ.
ಅಮೀರಸಾಬ ಹಯಾತಸಾಬ ಕಾಟೇನಹಳ್ಳಿ (62) ಮೃತ ವ್ಯಕ್ತಿ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿಯಾವುದೋ ವಾಹನ ಡಿಕ್ಕಿ ಹೊಡೆದಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.