ಇಳಕಲ್ಲದ ರಾಷ್ಟ್ರೀಯ ಹೆದ್ದಾರಿ 50 ರ ಸುರಭಿ ಡಾಬಾ ಹತ್ತಿರದಲ್ಲಿ ಪಲ್ಟಿಯಾಗಿ ಬಿದ್ದಿರುವ ವಾಹನ. 
ಜಿಲ್ಲೆ

ಲಾರಿ ಡಿಕ್ಕಿ ಹೊಡೆದು ವಾಹನ ಪಲ್ಟಿ

ವಿನಯ ಆಶೋಕ ನಾಯ್ಕ

ಇಳಕಲ್ಲ(ಗ್ರಾ): ಇಲ್ಲಿನ ರಾಷ್ಟ್ರೀಯ ಹೆದ್ದಾರಿ 50ರ ಸುರಭಿ ಢಾಬಾ ಸಮೀಪ ಗುರುವಾರ ಅಪರಿಚಿತ ಲಾರಿ ಡಿಕ್ಕಿ ಹೊಡೆದು ಐಸ್ ಕ್ಯೂಬ್ ತುಂಬಿದ್ದ ಅಪ್ಪೆ ವಾಹನ ಪಲ್ಟಿಯಾಗಿದೆ.

ಅಪಘಾತದಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.