ಜಿಲ್ಲೆ

ವಾಹನಗಳ ಸಂಚಾರಕ್ಕೆ ವಿಶೇಷ ಸಹಾಯವಾಣಿ

ಬೆಳಗಾವಿ: ಕರೊನಾ ವೈರಸ್ ನಿಯಂತ್ರಿಸಲು ಹೊರ ರಾಜ್ಯದಿಂದ ಬರುವ ಪ್ರಯಾಣಿಕರ ವಾಹನ ತಡೆಗಟ್ಟುವ, ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಸಾರಿಗೆ ಇಲಾಖೆಯಿಂದ ಸೂಕ್ತ ಕ್ರಮ ವಹಿಸಲು ಮತ್ತು ಅಲ್ಲಿಂದ ತುರ್ತು ಮಾಹಿತಿ ಪಡೆಯಲು ವಿಶೇಷ ಸಹಾಯವಾಣಿ ಹಾಗೂ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಂ) ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ನಿರಂತರ ಪೂರೈಕೆಗಾಗಿ ಯಾವುದೇ ಸಂಘ-ಸಂಸ್ಥೆ ಅಥವಾ ಸಾರ್ವಜನಿಕರಿಂದ ದೂರು ಬಂದಲ್ಲಿ ಸಂಬಂಧಪಟ್ಟ ಇಲಾಖೆಗೆ ರವಾನಿಸಿ ಸೂಕ್ತ ಕ್ರಮ ಜರುಗಿಸಲು ಈ ವ್ಯವಸ್ಥೆ ಅನುಕೂಲವಾಗಲಿದೆ. ಅಲ್ಲದೆ, ಸಾರ್ವಜನಿಕರಿಗೆ ಅಗತ್ಯವಾಗಿರುವ ವಸ್ತುಗಳು ಕೊರತೆಯಾಗದಂತೆ ವಾಹನ ಒದಗಿಸಲು ಸೂಕ್ತ ಕ್ರಮ ವಹಿಸಲಾಗುವುದು. ಸಾರಿಗೆ ವಲಯದ ಸಮಸ್ಯೆಗಳಿಗೂ ಇದರಿಂದ ಪರಿಹಾರ ಪಡೆದುಕೊಳ್ಳಬಹುದು ಎಂದಿದ್ದಾರೆ.

ಸಹಾಯವಾಣಿ: ನಿಯಂತ್ರಣ ಕೊಠಡಿ ದೂ. 080- 22236698, ಮೊ. 9449863214 ಹಾಗೂ ಬೆಂಗಳೂರಿನ ಶಾಂತಿನಗರ ಕೆ.ಎಚ್. ರಸ್ತೆಯಲ್ಲಿರುವ ಬಿಎಂಟಿಸಿ ಸಂಕೀರ್ಣದ ಮೊದಲನೇ ಮಹಡಿಯಲ್ಲಿರುವ ಸಾರಿಗೆ ಆಯುಕ್ತ ಕಚೇರಿಗೆ ಮಾಹಿತಿ ಸಲ್ಲಿಸಬಹುದು. ಸಾರ್ವಜನಿಕರು ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಡಿಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.