ಜಿಲ್ಲೆ

ಕಲೆಗೆ ವೆಂಕಪ್ಪಯ್ಯ ಪ್ರತಿಷ್ಠಾನದ ಕೊಡಗೆ ಗಣನೀಯ

Avinash R

ಮಧೂರು: ಕನ್ನಡ ಸಾಹಿತ್ಯ-ಸಂಸ್ಕೃತಿ-ಕಲೆ ಯಕ್ಷಗಾನ ಇತ್ಯಾದಿಗಳ ಉಳಿಸಿ ಬೆಳೆಸುವಲ್ಲಿ ಸರ್ಕಾರೇತರ ಸಂಘ-ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ಇತ್ತೀಚೆಗೆ ನಡೆದ ಸಂಸ್ಕೃತಿ ಶಿಬಿರದಲ್ಲಿ ಮಾತನಾಡಿದರು. ಗಡಿನಾಡು ಕಾಸರಗೋಡಿನಲ್ಲಿ ಯಕ್ಷಗಾನ ಹಾಗೂ ಸಾಹಿತ್ಯಕ್ಕಾಗಿ ಸಿರಿಬಾಗಿಲು ಪ್ರತಿಷ್ಠಾನ ನೀಡುತ್ತಿರುವ ಕೊಡುಗೆಗಳು ಗಣನೀಯವಾದದು ಎಂದರು.

ಜಾನಪದ ಸಂಶೋಧಕ ಡಾ.ಸುಂದರ ಕೇನಾಜೆ, ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೇಕೆರೆ ಶಂಕರ ನಾರಾಯಣ ಭಟ್ ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಸಿರಿಬಾಗಲು ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿ, ಗೌರವಿಸಿದರು.