ಕುಂದಾಪುರ: ಉಡುಪಿ ಜಿಪಂ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಉಡುಪಿ ಹಾಗೂ ನಿವೇದಿತಾ ಪ್ರೌಢ ಶಾಲೆ ಬಸ್ರೂರು ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಗಳಾದ ಪ್ರಣವ್ ಕೆ.ಶೇರೆಗಾರ್, ಮಾನ್ಯ, ಅಕ್ಷತಾ ಶೆಟ್ಟಿ, ಹರ್ಷಿಣಿ, ಸೋನಿಕಾ ಆರ್. ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ ಬೋಧಕೇತರರು ಅಭಿನಂದಿಸಿದ್ದಾರೆ.