ಯಳಂದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷದ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಿ. ವೆಂಕಟೇಶ್ ಅವರನ್ನು ಕಾಂಗ್ರೆಸ್ ಮುಖಂಡರು ಸೋಮವಾರ ಸನ್ಮಾನಿಸಿದರು. ಜಿಪಂ ಮಾಜಿ ಉಪಾಧ್ಯಕ್ಷ ಜೆ. ಯೋಗೇಶ್ ವೈ.ಕೆ.ಮೋಳೆ ನಾಗರಾಜು ಸೇರಿದಂತೆ ಅನೇಕರು ಇದ್ದರು.  
ಜಿಲ್ಲೆ

ಪದವೀಧರ ವಿಭಾಗದಿಂದ ವೆಂಕಟೇಶ್‌ಗೆ ಸನ್ಮಾನ

ಯಳಂದೂರು: ಚಾಮರಾಜನಗರದ ಕಾಂಗ್ರೆಸ್ ಪಕ್ಷದ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ತಾಲೂಕಿನ ಬಿಳಿಗಿರಿರಂಗನಬೆಟ್ಟದ ನಿವಾಸಿ ಸಿ.ವೆಂಕಟೇಶ್ ಅವರನ್ನು ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ಮುಖಂಡರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಉಪಾಧ್ಯಕ್ಷ ಜೆ.ಯೋಗೇಶ್ ಮಾತನಾಡಿ, ವೆಂಕಟೇಶ್ ಪಕ್ಷದ ಕ್ರಿಯಾಶೀಲ ಕಾರ್ಯಕರ್ತ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿದ್ದಾರೆ. ಹಾಗಾಗಿ ಸಂಸದರು, ಶಾಸಕರು ಸೇರಿದಂತೆ ಪಕ್ಷದ ಹಿರಿಯರು ಇವರನ್ನು ಪಕ್ಷದ ಪದವೀಧರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಪಕ್ಷ ಬಡವರ ಪರವಾಗಿ ತಂದಿರುವ ವಿವಿಧ ಯೋಜನೆಗಳು, ಗ್ಯಾರಂಟಿಗಳು, ಬಡವರಿಗೆ ನೀಡಿರುವ ಸವಲತ್ತುಗಳು, ಇದರಿಂದ ಆಗುತ್ತಿರುವ ಪ್ರಯೋಜನಗಳ ಬಗ್ಗೆ ಇವರು ಜಿಲ್ಲಾದ್ಯಂತ ಪ್ರವಾಸ ಮಾಡಿ ಅರಿವು ಮೂಡಿಸುವ ಕೆಲಸವನ್ನು ಮಾಡಬೇಕು ಎಂದರು.

ತಾಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವೈ.ಕೆ.ಮೋಳೆ ನಾಗರಾಜು, ಕಾಂಗ್ರೆಸ್ ಪಕ್ಷದ ಅಸಂಘಟಿತ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಾಪುರ ದೇವರಾಜು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡಶೆಟ್ಟಿ, ಜಯಣ್ಣ, ನಾಗರಾಜು, ಬಡಗಲಮೋಳೆ ಚೇತನ್, ರಾಜು, ಶ್ರೀನಿವಾಸ್, ಸಿದ್ದರಾಜು, ಮಲ್ಲೇಶ್ ಸೇರಿದಂತೆ ಅನೇಕರು ಇದ್ದರು.