ರಾಣೆಬೆನ್ನೂರ: ಮೊನ್ನೆ ನಡೆದ ಭಾರತೀಯ ಸೇನೆಯ ಮುಖ್ಯಸ್ಥರ ಅವಘಡದಂತೆ ಸಂಕ್ರಾತಿಯೊಳಗೆ ಮತ್ತೊಂದು ರಾಜಕೀಯ ಅವಘಡ ಸಂಭವಿಸುವ ಲಕ್ಷಣವಿದೆ. ಇದರಿಂದ ಜಗತ್ತು ತಲ್ಲಣಗೊಳ್ಳಲಿದೆ ಎಂದು ಹಾರನಹಳ್ಳಿ ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದರು.
ನಗರಕ್ಕೆ ಶುಕ್ರವಾರ ಖಾಸಗಿ ಕಾರ್ಯಕ್ರಮವೊಂದರ ನಿಮಿತ್ತ ಆಗಮಿಸಿದ ಅವರು ಮಾಧ್ಯಮದರೊಂದಿಗೆ ಮಾತನಾಡಿ, ನಾನು ಈ ಹಿಂದೆಯೇ ದೊಡ್ಡಮಟ್ಟದ ಅವಘಡ ಸಂಭವಿಸುವ ಕುರಿತು ಹೇಳಿದ್ದೆ. ಅದರಂತೆ ಭಾರತೀಯ ಸೇನೆಯ ಮುಖ್ಯಸ್ಥರ ಹೆಲಿಕಾಪ್ಟರ್ ದುರಂತ ಪ್ರಕರಣ ನಡೆದು ಹೋಯಿತು. ಇದೀಗ ಮತ್ತೆ ಅಂಥದ್ದೇ ದುರಂತ ಸಂಭವಿಸುವ ಲಕ್ಷಣವಿದೆ ಎಂದರು.
ಇದನ್ನೂ ಓದಿ: ಒಮಿಕ್ರಾನ್ ಮಾರಕವಲ್ಲ ಎಂಬ ಅಭಿಪ್ರಾಯದ ಬೆನ್ನಿಗೇ ಹೊರಬಿತ್ತು ಅದು ಜಾಗತಿಕವಾಗಿ ಅಪಾಯಕಾರಿ ಎನ್ನುವ ವಿಷಯ!
ಕರೊನಾ ರೂಪಾಂತರಿ ಹೆಚ್ಚಾಗುವ ಎಲ್ಲ ಲಕ್ಷಣಗಳಿವೆ. ರೋಗ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ದೇಶದಲ್ಲಿ ಸಂಶಯ, ಅಸಹನೆ, ದ್ವೇಷ ಹಾಗೂ ರಾಜಕೀಯ ಕಲಹಗಳು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಮಳೆ ಕೂಡ ಅಧಿಕವಾಗಿ ಸುರಿಯುವ ಲಕ್ಷಣವಿದೆ ಎಂದು ತಿಳಿಸಿದರು.