ಮಂಗಳೂರು : ಕಳೆದ ಒಂದು ತಿಂಗಳಿನಿಂದ ಕರ್ನಾಟಕದಲ್ಲಿ ಮೂವರು ಹಿಂದು ಯುವತಿಯರ ಹತ್ಯೆಯಾಗಿದೆ.
ಹುಬ್ಬಳ್ಳಿಯ ನೇಹಾ ಹತ್ಯೆ, ಕೊಡಗಿನಲ್ಲಿ ಮೀನಾ ಹತ್ಯೆ ಹಾಗೂ ಹುಬ್ಬಳ್ಳಿಯ ಅಂಜಲಿ ಹತ್ಯೆ ನಡೆದಿದೆ. ಪ್ರೀತಿಯ ಹೆಸರಲ್ಲಿ ಯುವತಿಯರ ಹತ್ಯೆ ಆಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು ನಾಗರಿಕ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದು ವಿಶ್ವ ಹಿಂದು ಪರಿಷತ್‌ನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
2013 ರಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದಾಗ ಹಿಂದೂ ಯುವಕರ ಸರಣಿ ಹತ್ಯೆಯಾಗಿದ್ದು , ಈಗ ಮತ್ತೆ ಇದೇ ಸರ್ಕಾರದಲ್ಲಿ ಹಿಂದೂ ಯುವತಿಯರ ಹತ್ಯೆ ಆಗುತ್ತಿರುವುದು ಗಂಭೀರ ವಿಷಯವಾಗಿದೆ . ಈ ಕೃತ್ಯಗಳು ರಾಜ್ಯದಲ್ಲಿ ಹೆಣ್ಣು ಮಕ್ಕಳನ್ನು
ಭಯಭೀತಗೊಳಿಸಿದೆ. ರಾಜ್ಯದಲ್ಲಿ ಈ ಸರ್ಕಾರ ಬಂದನಂತರ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ . ರಾಜ್ಯ ಪೋಲಿಸ್ ಇಲಾಖೆ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಕರಿಗೆ ಎನ್‌ಕೌಂಟರ್‌ನಂತಹ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.